‘ದಿ ಕೇರಳ ಸ್ಟೋರಿ’ ಸಿನಿಮಾಗೆ ಭಾರೀ ವಿರೋಧ: ಮೇ 5ರಂದು ರಿಲೀಸ್ ಅನುಮಾನ?

Public TV
2 Min Read

ಪೋಕಲ್ಪಿತ ಕಥೆ ಹಾಗೂ ಕೇರಳ ರಾಜ್ಯಕ್ಕೇ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ  ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಮಾಡಲಾಗಿದೆ ಎನ್ನುವ ಆರೋಪ ಹಲವರದ್ದು. ಒಂದು ಧರ್ಮವನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ಇಂತಹ ಚಿತ್ರವನ್ನು ರಿಲೀಸ್ ಮಾಡದಂತೆ ಕೇರಳದ ಅನೇಕ ಸಂಘಟನೆಗಳು ಒತ್ತಾಯಿಸಿವೆ. ಈ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಮೇ 5ಕ್ಕೆ ಬಿಡುಗಡೆ (Release) ಆಗತ್ತಾ ಎನ್ನುವ ಅನುಮಾನ ಕೂಡ ಮೂಡಿದೆ.

ಕಾಂಗ್ರೆಸ್ ಜೊತೆಗೆ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (DYFI) ಕೂಡ ವಿರೋಧವನ್ನು ವ್ಯಕ್ತ ಪಡಿಸಿದ್ದು, ಸಂಘ ಪರಿವಾರದವರು ಸೇರಿಕೊಂಡು, ಒಂದು ಸಮುದಾಯದ ವಿರುದ್ಧ ಕೆಟ್ಟ ಅಭಿಪ್ರಾಯ ಹುಟ್ಟುವಂತೆ ಈ ಸಿನಿಮಾವನ್ನು ತೋರಿಸಲು ಹೊರಟಿದ್ದಾರೆ. ಇದು ಕೇರಳ ರಾಜ್ಯಕ್ಕೂ ಅಪಮಾನ ಮಾಡುವಂತಹ ಚಿತ್ರ. ಹಾಗಾಗಿ ಕೂಡಲೇ ಬಿಡುಗಡೆಯನ್ನು ತಡೆಯಬೇಕು ಎಂದು ಮನವಿ ಮಾಡಿವೆ. ಇದನ್ನೂ ಓದಿ:ತಪ್ಪೆಲ್ಲ ನನ್ನದೇ ಎಂದು ಮಾಜಿ ಪ್ರೇಯಸಿಯರ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

ಎರಡು ದಿನಗಳ ಹಿಂದೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಸುತ್ತಾ ಹೆಣೆದಿರುವ ಕಥಾ ಹಂದರ ಬಿಜೆಪಿಗೆ ಚುನಾವಣೆ ಅಸ್ತ್ರವಾಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಮೇ 05 ರಂದು ದೇಶದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಹಲವು ಕಡೆ ವಿಶೇಷ ಪ್ರದರ್ಶನವನ್ನೂ ಆಯೋಜಿಸಲಾಗಿದೆ.

ಈ ಸಿನಿಮಾದಲ್ಲಿ ಲವ್ ಜಿಹಾದ್ ಜೊತೆಗೆ ಐಸಿಸ್ ಸೇರುವ ಮುನ್ನ ಮಾಡಲಾಗುವ ಬ್ರೈನ್ ವಾಷ್ ಸೇರಿದಂತೆ ಹತ್ತಾರು ವಿಷಯಗಳನ್ನು ಕಥಾಹಂದರದಲ್ಲಿ ಜೋಡಿಸಲಾಗಿದೆಯಂತೆ. ಕೇರಳದ ಯುವತಿಯರ ನಾಪತ್ತೆ ಆದ ಬಳಿಕ ಲವ್ ಜಿಹಾದ್ (Love Jihad) ಬಲೆ, ಐಸಿಸ್ ಸೇರಿದ ಕಾಲೇಜು ಯುವತಿಯರ ರಿಯಲ್ ಸ್ಟೋರಿಯನ್ನು ತೆರೆಯ ಮೇಲೆ ತಂದಿರೋದಾಗಿ ನಿರ್ದೇಶಕರು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷವು ಈ ವಿಷಯವನ್ನು ಇಟ್ಟುಕೊಂಡು ಹಲವು ಲಾಭಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಲೆಕ್ಕಾಚಾರ.

ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿತ್ತು. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆ ಇತ್ತು. ಇಂತಹ ಮಾತು ಮತ್ತು ಕಥೆ ವಿವಾದಕ್ಕೀಡಾಗಿತ್ತು.

Share This Article