ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

By
1 Min Read

– ಬಿಸಿಸಿಐಗೆ ಶೀಘ್ರದಲ್ಲೇ ದೂರು ಕೊಡ್ತೇನೆ ಎಂದ ಅಬ್ರಹಾಂ

ಬೆಂಗಳೂರು: 2025ರ ಐಪಿಎಲ್‌ ಫೈನಲ್‌ನಲ್ಲಿ ಪಂಜಾಬ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಗೆದ್ದು 18 ವರ್ಷಗಳ ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿತು. ಆದ್ರೆ ಈ ಖುಷಿ ಒಂದು ದಿನವೂ ಉಳಿಯಲಿಲ್ಲ. ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ರು. ಈ ಎಲ್ಲ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಆರ್‌ಸಿಬಿ ವಿರುದ್ಧ ಫಿಕ್ಸಿಂಗ್‌ ಬಾಂಬ್‌ ಸಿಡಿಸಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ (Bengaluru Stampede Case) ಸಂಬಂಧಿಸಿದಂತೆ ಸಿಎಂ, ಡಿಸಿಎಂ ಸೇರಿದಂತೆ ಐಎಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಇದೇ ವೇಳೆ ಆರ್‌ಸಿಬಿ ವಿರುದ್ಧ ಫಿಕ್ಸಿಂಗ್‌ ಆರೋಪ ಮಾಡಿದ್ದಾರೆ. ಇದನ್ನೂ ಓದಿ: `ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫೈನಲ್ ಪಂದ್ಯಕ್ಕೂ ಮುನ್ನವೇ ವಿಧಾನಸೌಧದ ಬಳಿ ಸಂಭ್ರಮಾಚರಣೆ, ಮೆರವಣಿಗೆ ಸಂಬಂಧ ಕಬ್ಬನ್ ಪಾರ್ಕ್ ಎಸಿಪಿಗೆ ಮಾಹಿತಿ ನೀಡಿ, ವಿಧಾನಸೌಧ ಬಳಿ ತಯಾರಿ ಮಾಡಿದ್ರಿ. ನಮ್ಮ ತಂಡ ಗೆಲ್ಲುತ್ತೆ ಅನ್ನೋ ಬಗ್ಗೆ ನಿಮಗೆ ಗೊತ್ತಾಗಿದ್ದು ಹೇಗೆ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆ ಪ್ಲ್ಯಾನ್ ಮಾಡಿದ್ದು ಹೇಗೆ? ಆಗಿದ್ದರೆ ಮೊದಲೇ ಆರ್‌ಸಿಬಿ ಗೆಲ್ಲುವ ಬಗ್ಗೆ ನಿಮಗೆ ಮಾಹಿತಿ‌ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ? ಈ ಬಗ್ಗೆ ಅನುಮಾನ ಇದೆ. ಈ ಬಗ್ಗೆಯೂ ಬಿಸಿಸಿಐಗೆ ಮುಂದಿನ ದಿನಗಳಲ್ಲಿ ದೂರು ಕೊಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: 5 ಎಸೆತಗಳಲ್ಲಿ 5 ವಿಕೆಟ್‌ – ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

Share This Article