Budget: ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ ಭಾಗ್ಯ

1 Min Read

ಬೆಂಗಳೂರು: ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಲಾಗಿದೆ.

2026-27ನೇ ಸಾಲಿನ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ, 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕೊಡುವ ಘೋಷಣೆ ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.

ಅಲ್ಲದೇ, ಎಡಿಬಿ ನೆರವಿನಡಿ 40 ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್‌ಗಳ ಅಭಿವೃದ್ಧಿ, 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಿವಿಗಳಲ್ಲಿ 1000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

31 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿರುವ ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು. 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಪದವಿ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು ಎಂದಿದ್ದಾರೆ.

Share This Article