ಅನಿವಾಸಿ ಭಾರತೀಯ ಮಹಿಳೆ ಮೇಲೆ ಪ್ರವಾಸಿ ಗೈಡ್, ಸ್ನೇಹಿತರಿಂದ ಗ್ಯಾಂಗ್ ರೇಪ್

Public TV
1 Min Read

ಲಕ್ನೋ: ಪ್ರವಾಸಕ್ಕೆಂದು ಮಥುರಾಗೆ ಬಂದಿದ್ದ ಅನಿವಾಸಿ ಭಾರತೀಯ ಮಹಿಳೆಯ ಮೇಲೆ ಗೈಡ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಪ್ರವಾಸಿ ಗೈಡ್ ಮೋನು ಹಾಗೂ ಮಸಾಜ್ ಪಾರ್ಲರ್ ನಡೆಸುತ್ತಿದ್ದ ಆತನ ಸ್ನೇಹಿತ ವಿಷ್ಣು ಬಂಧಿತ ಆರೋಪಿಗಳು. ದಕ್ಷಿಣ ಆಫ್ರಿಕಾದಲ್ಲಿ ವಾಸವಿರುವ ಅನಿವಾಸಿ ಭಾರತೀಯ ಮಹಿಳೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ತಪ್ಪಿಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

ಏನಿದು ಪ್ರಕರಣ?:
ಪ್ರವಾಸಕ್ಕೆಂದು ದಕ್ಷಿಣ ಆಫ್ರಿಕಾದಲ್ಲಿ ವಾಸವಿರುವ ಅನಿವಾಸಿ ಭಾರತೀಯ ಮಹಿಳೆ ಮಥುರಾ ನಗರಕ್ಕೆ ಬಂದಿದ್ದರು. ಹೀಗಾಗಿ ಕಳೆದ ಕೆಲವು ದಿನಗಳಿಂದ ಅತ್ತೆ ಹಾಗೂ ಮಾವನ ಜೊತೆಗೆ ವೃಂದಾವನದ ಇಸ್ಕಾನ್ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ವಾಸವಿದ್ದರು.

ಮಥುರಾದ ಗೋಕುಲ್ ಪ್ರದೇಶದ ಮತ್ತೊಂದು ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಲು ಮಹಿಳೆ ಹೋಗಿದ್ದರು. ಈ ವೇಳೆ ಆಕೆಯ ಮೇಲೆ ಪ್ರವಾಸಿ ಗೈಡ್ ಮೋನು, ವಿಷ್ಣು ಹಾಗೂ ಮತ್ತೋರ್ವ ಸೇರಿ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಸಂತ್ರಸ್ತೆಯ ಸ್ನೇಹಿತ ಮಥುರಾದ ಮಹಾವದನ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೋಮವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಸಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡುವಂತೆ ಸೂಚಿಸಿದ್ದು, ಮಹಿಳೆ ನಿರಾಕರಿಸಿದ್ದಾಳೆ. ಇದಿಂದಾಗಿ ತನಿಖೆ ಕಷ್ಟವಾಗಿದೆ ಎಂದು ಪೊಲೀಸ್ ಅಧಿಕಾರಿ ದಿಪೇಂದ್ರ ಸಿಂಗ್ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *