ವಿಷ ಕುಡಿದ ವ್ಯಕ್ತಿಯನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ ಶಾಸಕ

Public TV
1 Min Read

ದಾವಣಗೆರೆ: ವಿಷ (Poison) ಕುಡಿದಿದ್ದ ವ್ಯಕ್ತಿಯನ್ನು ಮಾಯಕೊಂಡ (Mayakonda) ಶಾಸಕ ಬಸವಂತಪ್ಪ (Basavantappa) ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ (Hospital) ಸಾಗಿಸಿ ಜೀವ ಉಳಿಸಿದ್ದಾರೆ.

ದಾವಣಗೆರೆ (Davangere) ತಾಲೂಕು ಅಣಬೇರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೇವಣಸಿದ್ದಪ್ಪ (45) ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ವಿಷ ಸೇವಿಸಿದ್ದ. ಆತನನ್ನು ಚಿಕಿತ್ಸೆಗೆ ಕರೆದೊಯ್ಯಲು ಅಂಬುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ 1 ಗಂಟೆ ಕಾದರೂ ಅಂಬುಲೆನ್ಸ್ ಬಾರದ ಹಿನ್ನೆಲೆ ಪಕ್ಕದ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಬಸವಂತಪ್ಪ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಮತ್ತೆ ಅರೆಸ್ಟ್ ವಾರೆಂಟ್ ಜಾರಿ

ವಿಷ ಕುಡಿದು 1 ಗಂಟೆಯಿಂದ ನರಳಾಡುತ್ತಿದ್ದ ವ್ಯಕ್ತಿಯ ಸ್ಥಿತಿ ಗಂಭೀರ ಆಗಿದ್ದರಿಂದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ತಮ್ಮ ಕಾರಿನಲ್ಲಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾವಣಗೆರೆಯ ಸಿಜೆ ಆಸ್ಪತ್ರೆಗೆ ವ್ಯಕ್ತಿಯನ್ನು ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಶಾಸಕರ ಸಮಯಪ್ರಜ್ಞೆಯಿಂದ ಜೀವವೊಂದು ಉಳಿದಿದೆ. ಇದನ್ನೂ ಓದಿ: ಕಾರ್ಯಕ್ರಮಕ್ಕೆ ಬಂದಿದ್ದ ಕೆನಡಾ ಉರ್ದು ಸಾಹಿತಿಗೆ ಹೃದಯಾಘಾತ

Share This Article