ಬೆಂಗಳೂರು: ಹಿಂದೆ ಕೇಂದ್ರ ಸರ್ಕಾರ ನಮ್ಮನ್ನು ಕಡೆಗಣಿಸಿ ತಮಿಳುನಾಡು ಮತ್ತು ಉತ್ತರಪ್ರದೇಶಕ್ಕೆ ಡಿಫೆನ್ಸ್ ಕಾರಿಡಾರ್ (Defence Corridor) ಮಂಜೂರು ಮಾಡಿದೆ. ಈ ಲೋಪವನ್ನು ನಾನು ಹಿಂದೆಯೇ ಕೇಂದ್ರದ ಗಮನಕ್ಕೆ ತಂದಿದ್ದೇನೆ. ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಬೆಳಗಾವಿ ನಡುವೆ ನಮಗೆ ಎರಡು ಡಿಫೆನ್ಸ್ ಕಾರಿಡಾರ್ ಕೊಡಬೇಕು. ಇದನ್ನು ಮನದಟ್ಟು ಮಾಡಿಕೊಡಲೆಂದೇ ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರನ್ನು ದೆಹಲಿಯಲ್ಲಿ ಭೇಟಿ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಇರಲಿದ್ದಾರೆ ಎಂದು ಎಂ.ಬಿ ಪಾಟೀಲ್ (M.B Patil) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಕ್ಷಣೆ ಮತ್ತು ವೈಮಾಂತರಿಕ್ಷ ವಲಯದಲ್ಲಿ ನಾವು ದೇಶಕ್ಕೇ ಅಗ್ರಸ್ಥಾನದಲ್ಲಿದ್ದೇವೆ. ಹೀಗಾಗಿ ನಮಗೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಒಂದೊಂದು ಡಿಫೆನ್ಸ್ ಕಾರಿಡಾರ್ ಅಗತ್ಯವಾಗಿ ಬೇಕಾಗಿದೆ. ಬೆಳಗಾವಿಯಲ್ಲಿ ಈಗ ಏಕಸ್ ತರಹದ ದೈತ್ಯ ಕಂಪನಿಗಳಿವೆ. ಬೇರೆ ರಾಜ್ಯದವರಿಗೆ ಡಿಫೆನ್ಸ್ ಕಾರಿಡಾರ್ ಕೊಡುವುದರಲ್ಲಿ ತಪ್ಪಿಲ್ಲ. ಆದರೆ, ನಮಗೆ ಸಲ್ಲಬೇಕಾದ್ದು ಸಲ್ಲಲೇಬೇಕು ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಟ್ರಕ್, ಕಾರು ನಡುವೆ ಅಪಘಾತ – ಭಾರತ ಮೂಲದ ನಾಲ್ವರು ಸಜೀವ ದಹನ
ಹಿಂದೆ ಮಾಡಿದ ತಪ್ಪು ಕೇಂದ್ರ ಸರ್ಕಾರಕ್ಕೆ ಅರಿವಾಗಿದೆ. ನಮ್ಮ ಹಿಂದಿನ ಭೇಟಿಗಳಲ್ಲಿ ರಾಜನಾಥ್ ಸಿಂಗ್ ಅವರೇ ಇದನ್ನು ಒಪ್ಪಿಕೊಂಡಿದ್ದರು. ಫೆಬ್ರವರಿಯಲ್ಲಿ ಅವರು ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬಂದಿದ್ದಾಗಲೂ ಈ ಸಂಗತಿಯನ್ನು ಪ್ರಸ್ತಾಪಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಇಂದು ಇಡೀ ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಸಿಎಂ