ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

Public TV
1 Min Read

ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ ಇಳಿಸುವ ಸಂಬಂಧ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ (M B Patil), ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ. ಸೋಮಣ್ಣ (V Somanna) ಅವರೊಂದಿಗೆ ಶನಿವಾರ ದೂರವಾಣಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವರು, ಈಗ ವಿಜಯಪುರ (Vijayapura), ಬಾಗಲಕೋಟೆಗೆ ಹೋಗುವ ರೈಲುಗಳು ಹುಬ್ಬಳ್ಳಿ ಮತ್ತು ಗದಗದಲ್ಲಿ ಇಂಜಿನ್ ಬದಲಿಸಿಕೊಳ್ಳಲು ಗಂಟೆಗಟ್ಟಲೆ ನಿಲ್ಲಬೇಕಾಗಿದೆ. 2 ಕಡೆ ಬೈಪಾಸ್ ಮೂಲಕ ರೈಲುಗಳನ್ನು ಸಾಗಿಹೋಗುವ ವ್ಯವಸ್ಥೆ ಆಗಬೇಕು. ಇದರಿಂದ ಗದಗ ಭಾಗದ ಜನತೆಗೂ ಅನುಕೂಲವಾಗುತ್ತದೆ. ಅಕಸ್ಮಾತ್ ಈಗಾಗಲೇ ಓಡುತ್ತಿರುವ ರೈಲುಗಳನ್ನು ಬೈಪಾಸ್ ಮೂಲಕ ಓಡಿಸುವುದು ಅಸಾಧ್ಯವಾದರೆ, ಹೊಸ ರೈಲುಗಳ ಸೇವೆಯನ್ನಾದರೂ ಆರಂಭಿಸಬೇಕು ಎಂದು ಕೋರಿದ್ದಾರೆ. ಇದನ್ನೂ ಓದಿ: ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

ಕೇಂದ್ರ ಸಚಿವ ಸೋಮಣ್ಣ ಅವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ತಾವು ದೆಹಲಿಗೆ ಹೋಗುತ್ತಿದ್ದು, ಈ ಸಂದರ್ಭದಲ್ಲಿ ಸಚಿವರನ್ನೂ ಹಾಗೂ ರೈಲ್ವೆ ಅಧಿಕಾರಿಗಳನ್ನೂ ಕಂಡು ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಡಿಸಿ, ಸಿಇಓಗಳ ಸಭೆಗೆ ತಡವಾಗಿ ಬಂದ ಡಿಸಿಎಂ, ಸಚಿವರು – ಸಿಎಂ ಸಿದ್ದರಾಮಯ್ಯ ಗರಂ

ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ ಅವರೊಂದಿಗೂ ಸಚಿವರು ಮಾತನಾಡಿದರು. ಈ ಭಾಗದಲ್ಲಿ ಬಾಕಿ ಇರುವ ರೈಲ್ವೆ ಹಳಿ ವಿದ್ಯುದೀಕರಣ ಜುಲೈ ಹೊತ್ತಿಗೆ ಮುಗಿಯಲಿದೆ ಎಂದು ಶರ್ಮ ಹೇಳಿದ್ದಾರೆ. ಇದಾದ ಮೇಲೆ ಬೆಂಗಳೂರಿನಿಂದ ವಿಜಯಪುರ ಮತ್ತು ಬಾಗಲಕೋಟೆ ನಡುವಿನ ರೈಲು ಪ್ರಯಾಣದ ಅವಧಿ ಗಣನೀಯವಾಗಿ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆಂದು ತಿಳಿಸಿದ್ದಾರೆ.

Share This Article