ಮಂಡ್ಯ | ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

Public TV
2 Min Read

ಮಂಡ್ಯ: ಯುವತಿಯೋರ್ವಳು ಕಾವೇರಿ ನದಿಗೆ (Cauvery River) ಬಿದ್ದು ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ಜರುಗಿದೆ.

ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್ ಅವರ ಪುತ್ರಿ ಸಿಂಚನಾ (24) ಕಾವೇರಿ ನದಿಗೆ ಹಾರಿರುವ ಯುವತಿ ಆಗಿದ್ದಾಳೆ. ಯುವತಿ ಸಿಂಚನಾ ಎಂಸಿಎ ಪದವೀಧರೆಯಾಗಿದ್ದು, (MCA Graduate) ಕೆಲ ವರ್ಷಗಳಿಂದೀಚೆಗೆ ಪಿಸಿಓಡಿ (PCOD) ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಾಗಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ:  ಎತ್ತಿನಹೊಳೆ ಯೋಜನೆಗೆ ಅಡ್ಡಿ ಎದುರಾಗುತ್ತಾ? – ಕೇಂದ್ರ ನಾಯಕರ ಸಹಕಾರ ಕೇಳಿದ ಡಿಕೆಶಿ

ಮಂಗಳವಾರ ಸಂಜೆ ವೇಳೆಗೆ ಏಕಾಏಕಿ ಮನೆಯಿಂದ ಹೊರಟು ಹಾಸನ ಮೂಲಕ ಚನ್ನರಾಯಪಟ್ಟಣ ಮಾರ್ಗವಾಗಿ ಶ್ರೀರಂಗಪಟ್ಟಣಕ್ಕೆ ಬಸ್ಸಿನಲ್ಲಿ ಆಗಮಿಸಿದ್ದಾರೆ. ನಂತರ ಬಸ್ ನಿಲ್ದಾಣದಿಂದ ಬೆಂಗಳೂರು ದಿಕ್ಕಿಗೆ ನಡೆದು ಹೋದ ಈಕೆ ಉತ್ತರ ಕಾವೇರಿಯ ಸೇತುವೆ ಮೇಲಿಂದ ರಾತ್ರಿ 8ರ ಸಮಯದಲ್ಲಿ ಉಕ್ಕಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸ್ಥಳಿಯ ದಾರಿಹೋಕ ವಾಹನ ಸವಾರರು ತಕ್ಷಣ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

ವಿಷಯ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಹಾರೆ. ಘಟನಾ ಸ್ಥಳ ಸೇರಿದಂತೆ ನದಿ ತೀರದ 1 ಕಿಮಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊಬೈಲ್ ಬೆಳಕಿನಲ್ಲೇ ಹುಡುಕಾಟ ನಡೆಸಿದ್ದಾರೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್, ಆಧಾರ್ ಕಾಡ್೯ ಹಾಗೂ ಚಪ್ಪಲಿಗಳ ಆಧಾರದ ಮೇಲೆ ಈಕೆಯೇ ನದಿಗೆ ಹಾರಿದ್ದಾಳೆ ಎಂದು ಶಂಖೆ ವ್ಯಕ್ತಪಡಿಸಿ ಇದೀಗ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು

ಸಂಪೂರ್ಣ ಕತ್ತಲಾಗಿದ್ದ ಕಾರಣ ಹರಿಯುವ ಕಾವೇರಿಯ ಪ್ರವಾಹದ ನೀರಲ್ಲಿ ಸದ್ಯಕ್ಕೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಇಂದು (ಬುಧವಾರ) ಮುಂಜಾನೆಯಿಂದಲೇ ಹುಡುಕಾಟ ಆರಂಭಿಸಲು ಶುರು ಮಾಡಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article