ದೇವಸ್ಥಾನದ ಆವರಣದಲ್ಲಿ ಮಾಂಸ ಎಸೆದ ದುಷ್ಕರ್ಮಿಗಳು- 3 ಮಾಂಸದ ಅಂಗಡಿಗಳಿಗೆ ಬೆಂಕಿ

Public TV
1 Min Read

ಲಕ್ನೋ: ದುಷ್ಕರ್ಮಿಗಳು ದೇವಸ್ಥಾನದ ಕಾಂಪೌಂಡ್‍ನಲ್ಲಿ ಮಾಸದ ತುಂಡುಗಳನ್ನು ಎಸೆದಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು 3 ಮಾಸದ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ರಸೂಲಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದೊಳಗೆ ಮಾಸದ ತುಂಡುಗಳು ಬಿದ್ದಿದ್ದವು. ಇದರಿಂದಾಗಿ ಆಕ್ರೋಶಗೊಂಡ ಜನರು ಅಲ್ಲಿಯೇ ಸಮೀಪವಿರುವ 3 ಮಾಂಸದ ಅಂಗಡಿಗಳಿಗೆ ಬೆಂಕಿ ಹಚ್ಚಿದರು. ಅಷ್ಟೇ ಅಲ್ಲದೇ ಗುಂಪಿನ ಸದಸ್ಯರು ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಜೊತೆಗೆ ತಾಲ್ಗ್ರಾಮ್-ಇಂದ್ರಗಢ್ ರಸ್ತೆಯನ್ನು ತಡೆದರು. ಈ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ಉಚಿತ ಬೈಕ್ ಅಂಬುಲೆನ್ಸ್ – 5 ತಿಂಗಳಿನಿಂದ ವ್ಯಕ್ತಿಯಿಂದ ಫ್ರೀ ಸರ್ವೀಸ್

ಈ ವೇಳೆ ತಾಲಾಗ್ರಾಮ್ ಪೊಲೀಸರು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದರು. ಇದಾದ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂತೆಗೆದುಕೊಂಡು, ರಸ್ತೆಯನ್ನು ತೆರವುಗೊಳಿಸಿದರು. ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವದಲ್ಲಿ ರಾಹುಲ್ ಪಾಲ್ಗೊಳ್ತಾರೆ, `ಸರಿಯಾಗಿ ನಡ್ಕೊಳಿ’ – ಕೆಪಿಸಿಸಿಗೆ ಹೈಕಮಾಂಡ್ ವಾರ್ನಿಂಗ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *