ಜೈಪುರ: ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು (Medical Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ (Udaipur) ನಡೆದಿದೆ.
ಗುರುವಾರ ರಾತ್ರಿ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅಂತಿಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿ ಶ್ವೇತಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ರೂಮ್‌ಮೇಟ್ ಶ್ವೇತಾ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಹಾಸ್ಟೆಲ್ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು
ಹಾಸ್ಟೆಲ್ ರೂಂನಲ್ಲಿ ಶ್ವೇತಾ ಸಿಂಗ್ ಬರೆದ ಡೆತ್ ನೋಟ್ ಪತ್ತೆಯಾಗಿದ್ದು, ಅಧ್ಯಾಪಕರು ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಮತ್ತು ಸಮಯಕ್ಕೆ ಸರಿಯಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ
ವಿದ್ಯಾರ್ಥಿನಿಯ ಆತ್ಮಹತ್ಯೆ ಬಳಿಕ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿ, ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಸ್ತೆಯನ್ನು ತಡೆದಿದ್ದಾರೆ. ಕಾಲೇಜು ನಿರ್ದೇಶಕರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಅಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಕಾಲೇಜು ಆಡಳಿತ ಮಂಡಳಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಅಧ್ಯಾಪಕರನ್ನು ವಜಾಗೊಳಿಸಲಾಗುವುದು ಎಂದು ಕಾಲೇಜು ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ: ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್
ಸದ್ಯ ವಿದ್ಯಾರ್ಥಿನಿಯ ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಆಕೆಯ ಕುಟುಂಬಸ್ಥರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಸುಖೇರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರವೀಂದ್ರ ಚರಣ್ ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್ ಮಾಡಿ: ನಿಖಿಲ್ ಕುಮಾರಸ್ವಾಮಿ ಸ್ಕ್ಯಾನರ್‌ನಲ್ಲಿರೋ ಫೋಟೊ ಯಾರದ್ದು?