ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ ರೇಪ್‌; ಬಂಗಾಳದಲ್ಲಿ ಮತ್ತೊಂದು ಕ್ರೂರ ಘಟನೆ

Public TV
1 Min Read

ಕೋಲ್ಕತ್ತಾ: ಆರ್‌ಜಿಕರ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ (Medical College Student) ಮೇಲೆ ನಡೆದ ಅತ್ಯಚಾರ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು, ಇದರ ಬೆನ್ನಲೆ ಪಶ್ಚಿಮ ಬಂಗಾಳದಲ್ಲಿ (West Bengal) ಮತ್ತೊಂದು ಘೋರ ಘಟನೆ ನಡೆದಿದೆ. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಒಡಿಶಾದ ಜಲೇಶ್ವರ ನಿವಾಸಿಯಾಗಿರುವ ಯುವತಿ, ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ (Private Medical College) ದ್ವೀತಿಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಶುಕ್ರವಾರ ರಾತ್ರಿ ಸ್ನೇಹಿತನೊಂದಿಗೆ ಊಟಕ್ಕೆ ಹೋಗಿ ಮರಳುವ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌

ಸಂತ್ರಸ್ಥ ಯುವತಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ. ಇಲ್ಲಿಯವರೆಗೆ ಈ ಸಂಪೂರ್ಣ ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ.

ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿನಿಯ ಪೋಷಕರು, ತಮ್ಮ ಮಗಳ ಸ್ನೇಹಿತರಿಂದ ಕರೆ ಬಂದ ನಂತರ ಇಂದು ಬೆಳಗ್ಗೆ ದುರ್ಗಾಪುರ ತಲುಪಿದ್ದೇವೆ ಎಂದು ಹೇಳಿದರು. ವಿದ್ಯಾರ್ಥಿನಿಯ ತಂದೆ ಮಾತನಾಡಿ, ನಮಗೆ ಅವಳ ಸ್ನೇಹಿತರಿಂದ ಕರೆ ಬಂತು ಮತ್ತು ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಆತ್ಮಾಹುತಿ ದಾಳಿ – 7 ಪೊಲೀಸರು, 6 ಉಗ್ರರು ಸಾವು

ನಾವು ಇಂದು ಬೆಳಗ್ಗೆ ಇಲ್ಲಿಗೆ ಬಂದು ಪೊಲೀಸ್ ದೂರು ದಾಖಲಿಸಿದ್ದೇವೆ. ಪ್ರಸ್ತುತ, ಪೊಲೀಸರು ಎಲ್ಲಾ ಸಂಭಾವ್ಯ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ತನಿಖಾ ಅಧಿಕಾರಿಗಳು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು | ಬಾಲಕಿಯ ರೇಪ್‌ ಬಳಿಕ ಎದೆ, ಹೊಟ್ಟೆ, ಮರ್ಮಾಂಗಕ್ಕೆ 19 ಬಾರಿ ಚಾಕು ಇರಿದು ಕೊಂದಿದ್ದ ಕಾಮುಕ 

Share This Article