ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ

1 Min Read

– ಅವಧಿ ಮೀರಿದ ಮಾತ್ರೆ ನೀಡಿದ್ದ ಆರೋಪದಿಂದ ಮನನೊಂದು ಸೂಸೈಡ್

ಕಾರವಾರ: ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧ ವಿತರಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ (Karwar) ನಡೆದಿದೆ.

ಕಾರವಾರದ ಪಿಕ್ಳೆ ನರ್ಸಿಂಗ್ ಹೋಂನ ಔಷಧಿ ವಿತರಕ ರಾಜು ಪಿಕ್ಳೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ಇರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR

ಕಳೆದ ಹದಿನೈದು ದಿನದ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಆರೋಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ರಾಜು ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.

ಅಪರಿಚಿತ ರೋಗಿಯ ಸಂಬಂಧಿಯಿಂದ ಹಿಡ್ಡನ್ ವಿಡಿಯೋ ಮಾಡಿ ವೈರಲ್ ಮಾಡಲಾಗಿತ್ತು. ಇದು ಕಣ್ತಪ್ಪಿನಿಂದ ಆದ ಸಮಸ್ಯೆ ಎಂದು ರಾಜು ಅವರು ಕ್ಷಮೆ ಕೇಳಿದ್ದರು. ಇವತ್ತು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಕೋಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಕಲಬುರಗಿ| ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

Share This Article