ಲೋಕಸಭಾ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ: ಡಿ.ಕೆ ಶಿವಕುಮಾರ್

Public TV
1 Min Read

ಬೆಂಗಳೂರು: ಲೋಕಸಭಾ ಚುನಾವಣೆ ಸಿದ್ಧತೆ, ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಹಲವು ವಿಚಾರವಾಗಿ ಚರ್ಚೆ ಮಾಡಲು ದೆಹಲಿಯಲ್ಲಿ ಆಗಸ್ಟ್ 2 ರಂದು ಸಭೆ ಇದೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ದೆಹಲಿ ಸಭೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ (Rahul Gandhi) ಅವರು ಬೆಂಗಳೂರಿಗೆ ಬಂದಾಗಲೇ ಸಭೆ ಆಗಬೇಕಿತ್ತು. ಉಮನ್ ಚಾಂಡಿ ಅವರ ನಿಧನದಿಂದ ಸಭೆ ಆಗಿರಲಿಲ್ಲ. ಹೀಗಾಗಿ ಆಗಸ್ಟ್ 2 ರಂದು ಸಭೆ ಇದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಲೋಕಸಭಾ ಚುನಾವಣೆ (Loksabha Election) ಬಗ್ಗೆ ಚರ್ಚೆ ಮಾಡ್ತೀವಿ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ, ಪಕ್ಷ ಸಂಘಟನೆ, ಜವಾಬ್ದಾರಿ ಹಂಚಿಕೆ ಬಗ್ಗೆ ಚರ್ಚೆ ಆಗುತ್ತೆ. ಹೀಗಾಗಿ ಹಿರಿಯ ನಾಯಕರನ್ನ ಸಭೆ ಕರೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ

ಗ್ಯಾರಂಟಿಗಳ ಅನುಷ್ಠಾನ ವಿಚಾರವಾಗಿ ಚರ್ಚೆ ಮಾಡ್ತೀವಿ. ಗ್ಯಾರಂಟಿಗಳನ್ನ ಜನರಿಗೆ ಸರಿಯಾಗಿ ತಲುಪಿಸಲು ನಾಯಕರು ಸಲಹೆ ಕೊಡಲು ಕರೆದಿದ್ದಾರೆ. ಕೂತು ಈ ಬಗ್ಗೆ ಚರ್ಚೆ ಮಾಡ್ತೀವಿ ಅಂತ ಡಿಕೆಶಿ ಹೇಳಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್