ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಪತ್ನಿ ಅರೆಸ್ಟ್

Public TV
2 Min Read

– ಪತಿಯ ಕೊಲೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧನ

ಶಿಲ್ಲಾಂಗ್: ಹನಿಮೂನ್‌ಗೆಂದು ಮೇಘಾಲಯಕ್ಕೆ (Meghalaya) ತೆರಳಿದ್ದ ಇಂದೋರ್ ದಂಪತಿ (Indore Couple) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಉತ್ತರ ಪ್ರದೇಶದ (Uttar Pradesh) ಗಾಜಿಪುರದಲ್ಲಿ ಪತ್ನಿಯನ್ನು ಬಂಧಿಸಲಾಗಿದೆ.

ರಾಜಾ ರಘುವಂಶಿ (30) ಹತ್ಯೆಗೆ ಸಂಬಂಧಿಸಿದಂತೆ ಪತ್ನಿ ಸೋನಮ್ ರಘುವಂಶಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಸೋನಮ್ ಕೊಲೆಗಾರರನ್ನು ನೇಮಿಸಿಕೊಂಡು ಹನಿಮೂನ್ ಸಮಯದಲ್ಲಿ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಮೇಘಾಲಯ ಡಿಜಿಪಿ ಇದಶಿಶಾ ನೊಂಗ್ರಾಂಗ್ ಹೇಳಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

ಮೇ 23ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ಆಗಮಿಸಿದ್ದ ದಂಪತಿ, ಮಳೆಯಲ್ಲಿ ಸಮೃದ್ಧಿಯಾದ ಬೆಟ್ಟದ ಸೌಂದರ್ಯವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಚಿರಾಪುಂಜಿಗೆ ಬಂದಿದ್ದರು. ಈ ವೇಳೆ ಇಬ್ಬರೂ ನಾಪತ್ತೆಯಾಗಿದ್ದರು. ಈ ಸಂಬಂಧ ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರಿಗೆ ಆಳವಾದ ಕಂದಕದಲ್ಲಿ ಮೃತದೇಹವೊಂದು ಸಿಕ್ಕಿದ್ದು, ಕೈಯಲ್ಲಿದ್ದ ಟ್ಯಾಟೂ ನೋಡಿ ಇದು ಮೃತ ರಘುವಂಶಿಯದ್ದೇ ಎಂದು ಪತ್ತೆ ಮಾಡಲಾಗಿತ್ತು. ಪತ್ನಿಯ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾಗಲೇ ಸ್ಥಳೀಯ ಗೈಡ್‌ವೊಬ್ಬರ ಹೇಳಿಕೆ ಪ್ರಕರಣಕ್ಕೆ ರೋಚಕ ತಿರುವು ನೀಡಿತ್ತು. ಇದನ್ನೂ ಓದಿ: ಹಾಸನ| ನಿಲ್ಲಿಸಿದ್ದ ಕಾರಿನ ಡೋರ್‌ ತೆಗೆದು 6.30 ಲಕ್ಷ ಹಣ ಎಗರಿಸಿದ ಕಳ್ಳ

ಗೈಡ್ ಹೇಳಿದ್ದೇನು?
ಮೇ 23 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನೊಂಗ್ರಿಯಾತ್‌ನಿಂದ ಮಾವ್ಲಾಖಿಯಾತ್‌ಗೆ 3,000 ಮೆಟ್ಟಿಲುಗಳನ್ನು ಹತ್ತುತ್ತಿದ್ದಾಗ ಮೂವರು ಪುರುಷ ಪ್ರವಾಸಿಗರು ದಂಪತಿ ಜೊತೆಗೆ ಇದ್ದುದ್ದನ್ನು ನೋಡಿದೆ. ಮೇ.22ರಂದು ದಂಪತಿಯನ್ನ ನೊಂಗ್ರಿಯಾಟ್‌ಗೆ ಕರೆದೊಯ್ಯಲು ನಾನು ಮುಂದಾದೆ. ಆದರೆ, ಅವರು ನನ್ನ ಗೈಡ್ ಸೇವೆಯನ್ನ ಒಳ್ಳೆಯ ಮಾತುಗಳಿಂದಲೇ ಬೇಡವೆಂದರು. ಇದೇ ವೇಳೆ ಭಾ ವಾನ್ಸಾಯಿ ಎಂಬ ಇನ್ನೊಬ್ಬ ಗೈಡ್‌ನನ್ನು ನೇಮಕ ಮಾಡಿಕೊಂಡ ದಂಪತಿ, ಶಿವಾರಾ ಹೋಂಸ್ಟೇಯಲ್ಲಿ ರಾತ್ರಿ ಕಳೆದು, ಮರುದಿನ ಅವರಿಬ್ಬರೇ ಹೊರಬಂದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

ನಾನು ಅವರನ್ನು ಮತ್ತೆ ನೋಡಿದಾಗ ನಾಲ್ವರು ಪುರುಷರಿದ್ದರು, ಆದ್ರೆ ಅವರು ಹಿಂದಿಯಲ್ಲಿ ಮಾತನಾಡುತ್ತಿದ್ದರು. ಹಾಗಾಗಿ ನನಗೆ ಅದನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಆಗಲಿಲ್ಲ. ಪುರುಷರು ಮೌಲಖಿಯಾತ್ ತಲುಪಿದಾಗ, ದಂಪತಿಗಳ ಸ್ಕೂಟರ್ ಅಲ್ಲಿ ಇರಲಿಲ್ಲ ಎಂದು ಗೈಡ್ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಂಡೀಪುರದಲ್ಲಿ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

Share This Article