ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು – ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

Public TV
1 Min Read

ಹಾವೇರಿ: ದೇವರ ದರ್ಶನಕ್ಕೆಂದು ತಿರುಪತಿಗೆ (Tirupati Temple) ಹೋಗುತ್ತಿದ್ದ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು (Ranebennur )ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.

ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದ ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ಹೋಗುತ್ತಿದ್ದ ವೇಳೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ-4ರ (NH-4) ಹಲಗೇರಿ ಬ್ರಿಡ್ಜ್‌ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ (Road Accident) ಕಾರಣ ಎಂದು ಹೇಳಲಾಗಿದೆ. ಮೃತರನ್ನ ಸುರೇಶ ಜಾಡಿ (54), ಐಶ್ವರ್ಯ ಬಾರ್ಕಿ (22), ಚೇತನಾ (7), ಪವಿತ್ರಾ ಸಮಗಂಡಿ (28) ಎಂದು ಗುರುತಿಸಲಾಗಿದೆ. ಮೃತರು ಹಾವೇರಿನಗರದ ನಿವಾಸಿಗಳಾಗಿದ್ದಾರೆ.

ಗಾಯಗೊಂಡವರನ್ನ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ಬಾರ್ಕಿ, ಪ್ರಭುರಾಜ ಸಮಗಂಡಿ, ಗೀತಾ ಬಾರ್ಕಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ಸದ್ಯ ದಾವಣಗೆರೆ ಮತ್ತು ತಾಲ್ಲೂಕು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಣೆಬೆನ್ನೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್‌ ಕೃಷ್ಣಂ ಮತ್ತೆ ವಾಗ್ದಾಳಿ

Share This Article