Mekedatu Padayatra: ಮಕ್ಕಳನ್ನು ಭೇಟಿ ಮಾಡಿದ್ದ ಡಿಕೆ ಶಿವಕುಮಾರ್‌ ವಿರುದ್ಧ ಕೇಸ್‌

Public TV
1 Min Read

ನವದೆಹಲಿ: ಸರ್ಕಾರದ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ(ಎನ್‌ಸಿಪಿಸಿಆರ್‌) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.

ಪಾದಯಾತ್ರೆ ವೇಳೆ ಶಾಲಾ ಮಕ್ಕಳನ್ನು ಶಿವಕುಮಾರ್‌ ಭೇಟಿಯಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಪತ್ರ ಬರೆದಿದೆ.

ಪತ್ರದಲ್ಲಿ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್‌ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ. ಪತ್ರದಲ್ಲಿ ಡಿ.ಕೆ.ಶಿವಕುಮಾರ್‌ ಅವರು ಶಾಲಾ ಮಕ್ಕಳೊಂದಿಗೆ ಇರುವ ವಿಡಿಯೋದ ಟ್ವಿಟ್ಟರ್‌ ಲಿಂಕ್‌ ಅನ್ನು ಉಲ್ಲೇಖಿಸಿದೆ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಂಡಿರುವ ಬಗ್ಗೆ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ. ಇದನ್ನೂ ಓದಿ: ಕೊರೊನಾ ಟೆಸ್ಟ್‌ ಮಾಡಿ ಪಾದಯಾತ್ರೆ ಹತ್ತಿಕ್ಕುವ ಹುನ್ನಾರ ಮಾಡ್ತಿದೆ ಬಿಜೆಪಿ: ಡಿಕೆಶಿ

ಶಿವಕುಮಾರ್‌ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಆ ವೇಳೆ ಮಕ್ಕಳ ಗುಂಪಿನ ನಡುವೆ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್‌ ಧರಿಸದೇ ಫೋಟೊ ತೆಗೆಸಿಕೊಂಡಿದ್ದು ಟೀಕೆಗೆ ಗುರಿಯಾಗಿತ್ತು.  ಇದನ್ನೂ ಓದಿ: ಡಿಕೆಶಿಗೆ ಕೊರೊನಾ ಅಂಟಿಸಲು ಸೋಂಕಿತ ವ್ಯಕ್ತಿಯನ್ನು ಕಳುಹಿಸಿದ್ದಾರೆ: ಡಿ.ಕೆ ಸುರೇಶ್

Share This Article
Leave a Comment

Leave a Reply

Your email address will not be published. Required fields are marked *