ಕನ್ನಡ ಅನುವಾದದಲ್ಲಿ ತಪ್ಪು – ಸಿಎಂ ಬಳಿ ಕ್ಷಮೆ ಕೇಳಿದ ಫೇಸ್‌ಬುಕ್‌

Public TV
1 Min Read

ಬೆಂಗಳೂರು: ‘ಮೆಟಾ’ ವೇದಿಕೆಗಳಲ್ಲಿ ಕನ್ನಡ (Kannada) ಸ್ವಯಂ ಅನುವಾದದ ವೇಳೆ ಭಾರೀ ಲೋಪ ಹಾಗೂ ನೈಜ ಅರ್ಥವೇ ನಾಶವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಫೇಸ್‌ಬುಕ್‌ (Facebook) ಮಾತೃ ಸಂಸ್ಥೆ ಮೆಟಾ (Meta) ಕ್ಷಮೆಯಾಚಿಸಿದೆ. ಅನುವಾದದಲ್ಲಿ ಕೆಲಕಾಲ ದೋಷ ಕಂಡುಬರಲು ಕಾರಣವಾಗಿದ್ದ ಅಂಶಗಳನ್ನು ನಾವು ಸರಿಪಡಿಸಿದ್ದೇವೆ. ಇಂಥ ಘಟನೆ ನಡೆದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ಹೇಳಿದೆ.

ಮೆಟಾ ಪ್ಲಾಟ್‌ಫಾರ್ಮ್‌ಗಳಲ್ಲಿ ಅನುವಾದ ದೋಷದ ಬಗ್ಗೆ ಸಿಎಂ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿ, ಕನ್ನಡದ ವಿಷಯಗಳ ದೋಷಪೂರಿತ ಅನುವಾದವು ಸತ್ಯಾಂಶಗಳನ್ನೇ ನಾಶಪಡುತ್ತಿದೆ. ಈ ವೇದಿಕೆಯ ಬಳಕೆದಾರರನ್ನು ತಪ್ಪುಗ್ರಹಿಕೆಗೆ ಕಾರಣವಾಗುತ್ತಿದೆ. ಇದು ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಅಸಮಾಧಾನ ಹೊರಹಾಕಿದ್ದರು. ಇದನ್ನೂ ಓದಿ: ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

ಕನ್ನಡ ಅನುದಾದದಲ್ಲಿ ಆಗುತ್ತಿರುವ ಲೋಪ ತಕ್ಷಣವೇ ಸರಿಪಡಿಸುವಂತೆ ಒತ್ತಾಯಿಸಿ ನನ್ನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೆಟಾಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದರು. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ ಅಂತಿಮ ದರ್ಶನ ಪಡೆದ ವಿಚಾರವು ‘ಮೆಟಾ’ದಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಆದ ಸ್ವಯಂ ಅನುವಾದ ಬಹಳ ಕೆಟ್ಟದಾಗಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು. ಅನುವಾದದ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾ ತಿಳಿಸಿದೆ. ಇದನ್ನೂ ಓದಿ: ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Share This Article