ಹಠಾತ್ ಪ್ರವಾಹ ಮುನ್ಸೂಚನೆ – ಸಾರ್ವಜನಿಕರಿಗೆ ಮುನ್ನೆಚ್ಚರಿಕೆಯ ಸೂಚನೆ

Public TV
1 Min Read

ಬೆಳಗಾವಿ: ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಮುನ್ಸೂಚನೆ (Flash Flood Forecast) ನೀಡಿದೆ. ಈ ಬಗ್ಗೆ ಬೆಳಗಾವಿ ಜಿಲ್ಲೆಯ ಜನರು ಇಲಾಖೆ ಸೂಚಿಸಿರುವ ಜಿಲ್ಲೆಗಳಿಗೆ ಪ್ರವಾಸಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಮಳೆ (Rain) ಹೆಚ್ಚಳವಾಗುತ್ತಿರುವುದರಿಂದ ಜನ ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕರು ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲ್ಲೂಕು ಸೇರಿದಂತೆ ಮೇಲ್ಕಂಡ ಜಿಲ್ಲೆಗಳ ಜಲಪಾತ ವೀಕ್ಷಣೆ ಹಾಗೂ ಚಾರಣ ಕೈಗೊಳ್ಳದಿರುವುದು ಒಳ್ಳೆಯದು. ಮಳೆಯಿಂದಾಗಿ ಪ್ರವಾಸಿ ತಾಣಗಳಲ್ಲಿ ಆಗಬಹುದಾದ ಅವಘಡಗಳನ್ನು ತಡೆಯಲು ಈ ಎಚ್ಚರಿಕೆಯನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರದಲ್ಲಿ ಅವಾಂತರದ ಬಳಿಕ ಮುಂಗಾರು ದಕ್ಷಿಣ ಭಾರತಕ್ಕೆ – ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

ಈ ಸಂದರ್ಭಗಳಲ್ಲಿ ಗುಡ್ಡ ಕುಸಿಯುವ ಸಂಭವ ಇರುತ್ತದೆ. ಆದ್ದರಿಂದ ಪ್ರವಾಸಿಗರು ಮತ್ತು ಗುಡ್ಡದ ಮೇಲೆ ವಾಸಿಸುವ ಗ್ರಾಮಸ್ಥರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಹಠಾತ್ ಪ್ರವಾಹದ ಮುನ್ಸೂಚನೆ ಇರುವುದರಿಂದ ಅಧಿಕಾರಿಗಳು ಖಾನಾಪುರ ಸೇರಿದಂತೆ ಗಡಿಭಾಗದ ತಾಲ್ಲೂಕುಗಳಲ್ಲಿ ನಿರಂತರ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಮುಸ್ಲಿಂ ಓಲೈಕೆಗೆ ಸಂವಿಧಾನಬಾಹಿರವಾಗಿ ವರ್ತಿಸಿದ್ರೆ ಪರಿಣಾಮ ನೆಟ್ಟಗಿರಲ್ಲ: ಸುನೀಲ್ ಕುಮಾರ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್