‘ಹ್ಯಾರಿ ಪಾಟರ್’ ಖ್ಯಾತಿಯ ಮೈಕೆಲ್ ಗ್ಯಾಂಬೊನ್ ನಿಧನ

By
1 Min Read

ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ (Harry Potter) ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡುತ್ತಿದ್ದ ಮೈಕೆಲ್ ಗ್ಯಾಂಬೋನ್ (Michael Gambon) ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೈಕಲ್ ಚಿಕಿತ್ಸೆ ಪಡೆಯುತ್ತಿದ್ದರು. ಹಲವು ದಿನಗಳಿಂದ ಆಸ್ಪತ್ರೆಗೂ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೈಕಲ್ ಇಹಲೋಕ (Passed Away) ತ್ಯಜಿಸಿದ್ದಾರೆ.

ಹ್ಯಾರಿ ಪಾಟರ್ ನಲ್ಲಿ ಮೈಕಲ್ ಪ್ರೊಫೆಸರ್ ಆಲ್ಬಸ್‍‍ ಡಂಬಲ್ಡೋರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಪಾತ್ರದ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಅವರು ಹೊಂದಿದ್ದರು. ತನ್ನ 22ನೇ ವಯಸ್ಸಿನಲ್ಲೇ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟಿದ್ದ ಮೈಕಲ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

 

ಓಪನ್ ರೇಂಜ್, ಲೇಯರ್ ಕೇಕ್ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಇವರು ನಟಿಸಿದ್ದು, ಕೊನೆಯಾದಾಗಿ 2019ರಲ್ಲಿ ತೆರೆಕಂಡ ಕಾರ್ಡೇಲಿಯಾ ಚಿತ್ರಕ್ಕೆ ಬಣ್ಣ ಹಚ್ಚಿದ್ದರು. ಹಿರಿಯ ನಟನ ನಿಧನಕ್ಕೆ ಹಾಲಿವುಡ್ ನ ಅನೇಕ ತಾರೆಯರು ಮತ್ತು ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ. ಅವರ ಪಾತ್ರಗಳನ್ನು ನೆನಪಿಸಿಕೊಂಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್