ಮೈಕ್ರೋ ಫೈನಾನ್ಸ್ ಕಿರುಕುಳ| ಸರ್ಕಾರ ಬದುಕಿದ್ಯಾ.. ಸತ್ತಿದ್ಯಾ?: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Public TV
1 Min Read

ಬೆಂಗಳೂರು: ಮೈಕ್ರೋ ಫೈನಾನ್ಸ್‌ನಿಂದ ತಪ್ಪಾಗಿದೆ ಅಂತ ತಕ್ಷಣ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಕಠಿಣ ಕಾನೂನು ಇದೆ. ಆದರೆ,‌ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ರೋಶ ಹೊರ ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸರ್ಕಾರ ಬೇಜವಾಬ್ದಾರಿತನ ತೋರಿಸುತ್ತಿದೆ. ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಸಿಎಂ ಸಭೆ ಮಾಡಲು ಇಷ್ಟು ದಿನ ಬೇಕಾಯ್ತಾ? ಪೊಲೀಸರು, ಅಧಿಕಾರಿಗಳು ಇಲ್ವಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಎರಡು ಲಕ್ಷಕ್ಕೆ 25 ಲಕ್ಷ.. ಮೀಟರ್ ಬಡ್ಡಿ ದಂಧೆಯಲ್ಲಿ ಯಕ್ಷಗಾನ ಕಲಾವಿದನ ಮೇಲೆ ಮಾರಣಾಂತಿಕ ಹಲ್ಲೆ

ಮೈಕ್ರೋ ಫೈನಾನ್ಸ್‌ನಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇತಿಮಿತಿಯಿಲ್ಲದೆ ಮೈಕ್ರೋ ಫೈನಾನ್ಸ್ ಹಾವಳಿ ನಡೆಯುತ್ತಿದೆ. ಮೈಕ್ರೋ ಫೈನಾನ್ಸ್‌ನಿಂದ ಬಡವರಿಗೆ ವಂಚನೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಕಾಲದಲ್ಲಿ ಕಾನೂತ್ಮಕವಾಗಿ ತಿದ್ದುಪಡಿ ತಂದಿದ್ದರು. ಈ ಸರ್ಕಾರ ಬಂದ್ಮೇಲೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದೆ. ರಾಮನಗರದಲ್ಲಿ ಮೈಕ್ರೋ ಫೈನಾನ್ಸ್‌ನಿಂದ ಕಿಡ್ನಿ ಮಾರಿಕೊಂಡ ವರದಿಯಾಗಿದೆ. ಈ ಸರ್ಕಾರ ನಿದ್ದೆ ಮಾಡ್ತಿದ್ಯಾ? ಬದುಕಿದ್ಯಾ.. ಸತ್ತಿದ್ಯಾ ಅಂತ ಕೇಳಬೇಕಾಗುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರೆಡ್ಡಿ ಜೊತೆ ಸಂಪರ್ಕವೇ ಬೇಡ – ಮನೆಯ ಗೇಟನ್ನೇ ಬಂದ್‌ ಮಾಡಿದ ರಾಮುಲು

Share This Article