ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

Public TV
2 Min Read
mig 21 1

ಜೈಪುರ: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯು ಸೇನೆಯ ಮಿಗ್-21 ವಿಮಾನ ಇಂದು ಸಂಜೆ ಪತನಗೊಂಡಿದೆ.

MiG 29K aircraft

ಮಿಗ್-21 ವಿಮಾನ ಪತನದ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಜೈಸಲ್ಮೇರ್‍ನ ಎಸ್‍ಪಿ ಅಜಯ್ ಸಿಂಗ್, ನಮಗೆ ಇಂದು ಸಂಜೆ ಭಾರತೀಯ ಸೇನೆಯ ಮಿಗ್-21 ವಿಮಾನ ಮರುಭೂಮಿ ರಾಷ್ಟ್ರೀಯ ಉದ್ಯಾನವನ (DNP) ಬಳಿ ಪತನ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ನಾವು ವಿಮಾನ ಪತನಗೊಂಡ ಸ್ಥಳಕ್ಕೆ ತೆರಳುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 44 ವರ್ಷ ಹಳೆಯ ಕಾರನ್ನು ಯಾರೂ ಬಳಸಲಾರರು – ಮಿಗ್ ಬಳಕೆ ಕುರಿತು ಧನೋವಾ ಮಾತು

ವಿಮಾನ ಪತನಗೊಂಡಿರುವುದನ್ನು ಮೊದಲು ಅರಣ್ಯ ಅಧಿಕಾರಿಗಳು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಾಯು ಸೇನೆ ಪೈಲಟ್ ಹುತಾತ್ಮರಾಗಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿದೆ.

ರಷ್ಯಾದ ಮಿಕೋಯಾನ್ ಗುರೇವಿಚ್(ಮಿಗ್) 21 ಬೈಸನ್ 1959 ರಲ್ಲಿ ತಯಾರಾಗಿದ್ದು, 1963 ರಲ್ಲಿ ಮಿಗ್ 21 ವಿವಿಧ ಆವೃತ್ತಿ ಒಟ್ಟು 874 ವಿಮಾನಗಳು ಭಾರತದ ವಾಯುಸೇನೆಗೆ ಸೇರ್ಪಡೆಯಾಗಿತ್ತು. 1971 ರಲ್ಲಿ ಬಾಂಗ್ಲಾ ಕದನದ ವೇಳೆ ಪ್ರಮುಖ ಪಾತ್ರವಾಹಿಸಿದ್ದ ಮಿಗ್ ಪಾಕಿಸ್ತಾನ 9 ವಿಮಾನಗಳನ್ನು ಹೊಡೆದು ಹಾಕಿತ್ತು. ಉಳಿದ ಯುದ್ಧ ವಿಮಾನಗಳಿಗೆ ಹೋಲಿಸಿದರೆ ಈ ವಿಮಾನಗಳ ಸಾಮರ್ಥ್ಯ ಕಡಿಮೆ ಎಂದು ಗೊತ್ತಾದ ಬಳಿಕ 1990 ರಲ್ಲಿ ಇವುಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಇದನ್ನೂ ಓದಿ: ಯೋಧರ ನಾಡಿಗೆ ಬಂದ ಮಿಗ್-21 ಯುದ್ಧ ವಿಮಾನ

MIG

ಸದ್ಯ ಭಾರತದಲ್ಲಿ ಈಗ 100ಕ್ಕೂ ಅಧಿಕ ಮಿಗ್ ವಿಮಾನಗಳಿವೆ. ಖರೀದಿಸಿದ ಪೈಕಿ 500ಕ್ಕೂ ಹೆಚ್ಚು ವಿಮಾನಗಳು ಪತನಗೊಂಡಿದೆ. ಹೀಗಾಗಿ ವಾಯುಪಡೆಯಲ್ಲಿ ಈ ವಿಮಾನಗಳು ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿವೆ. ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯಗೊಂಡು ಪತನದ ಸೂಚನೆ ಸಿಕ್ಕಿದ ಕೂಡಲೇ ಹಲವು ಪೈಲಟ್ ಗಳು ಎಜೆಕ್ಟ್ ಆಗದೇ ವಿಮಾನವನ್ನು ಜನವಸತಿ ಇಲ್ಲದ ಕಡೆಗೆ ತಿರುಗಿಸಿ ಪ್ರಾಣಬಿಟ್ಟಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಉತ್ತರ ಪ್ರದೇಶದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ

abhinandan 1551541519

“ಹಾರುವ ಶವಪೆಟ್ಟಿಗೆ” ಎಂಬ ಕುಖ್ಯಾತಿ, ಎಫ್ 16 ಮುಂದೆ ಏನು ಅಲ್ಲ ಎಂದು ಭಾವಿಸಿದ್ದರೂ ಅಭಿನಂದನ್ ಈ ವಿಮಾನ ಮೂಲಕವೇ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಒಂದು ವಿಮಾನವನ್ನು ಉರುಳಿಸಿದ್ದರು. 2016 ರಲ್ಲಿ 110 ಮಿಗ್ 21 ಜೆಟ್ ವಿಮಾನಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಈ ಸಂದರ್ಭದಲ್ಲಿ ಮಲ್ಟಿ ಮೋಡ್ ರೇಡಾರ್, ಉತ್ತಮ ಏವಿಯಾನಿಕ್ಸ್, ಸಂವಹನ ವ್ಯವಸ್ಥೆಯನ್ನು ನೀಡಲಾಗಿತ್ತು.

Share This Article