ವಾಯುಸೇನೆಯ ವಿಮಾನ ಪತನ- ಮೂವರ ದುರ್ಮರಣ

Public TV
1 Min Read

ಜೈಪುರ್: ಭಾರತೀಯ ವಾಯುಸೇನೆಯ (Indian Air Force) ಮಿಗ್-21 ಯುದ್ಧ ವಿಮಾನ (MIG-21 Fighter Aircraft) ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ರಾಜಸ್ಥಾನದ (Rajasthan) ಹನುಮಾನ್‍ಗಢದಲ್ಲಿ (Hanumangarh) ಸೋಮವಾರ ನಡೆದಿದೆ.

ಪೈಲಟ್ ಮತ್ತು ಸಹ ಪೈಲಟ್ ಸಕಾಲದಲ್ಲಿ ವಿಮಾನದಿಂದ ಜಿಗಿದು, ಪ್ಯಾರಾಚೂಟ್ ಸಹಾಯದಿಂದ ಸುರಕ್ಷಿತವಾಗಿ ಇಳಿದಿದ್ದಾರೆ. ಆದರೆ ವಿಮಾನ ಮನೆಯ ಮೇಲೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಾಂತೇವಾಡ ಸ್ಫೋಟ ಪ್ರಕರಣ- ಅಪ್ರಾಪ್ತರು ಸೇರಿ ನಾಲ್ವರು ಮಾವೋವಾದಿಗಳು ಅರೆಸ್ಟ್

ಸೂರತ್‍ಗಢದಿಂದ ವಿಮಾನ ಟೇಕಾಫ್ ಆಗಿತ್ತು. ಟೇಕಾಫ್ ಆದ ಸ್ವಲ್ಪ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದೆ. ವಿಮಾನ ಪತನಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆ. 4 ರಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ (Army chopper) ಪತನವಾಗಿತ್ತು. ಈ ವೇಳೆ ಓರ್ವ ಮೃತ ಪಟ್ಟು, ಇಬ್ಬರು ಪೈಲಟ್‍ಗಳು ಗಾಯಗೊಂಡಿದ್ದರು. ಇದನ್ನೂ ಓದಿ: ಪ್ರವಾಸಿ ದೋಣಿ ಮುಳುಗಡೆ – ಮಕ್ಕಳು ಸೇರಿದಂತೆ 22 ಮಂದಿ ನೀರುಪಾಲು

Share This Article