– ಬಿಜೆಪಿ ಅವಧಿಯ 200 ಕೋಟಿ ಹಣ ಬಿಡುಗಡೆ ಮಾಡೋದಾಗಿ ಭರವಸೆ
ಬೆಂಗಳೂರು: ಗುತ್ತಿಗೆದಾರರ (Contractors) ಸಂಘದ ಅಧ್ಯಕ್ಷ ಮಂಜುನಾಥ್ ಅವರು ಮಾಡಿರುವ ಆರೋಪಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ (Byrathi Suresh) ತೀವ್ರ ಆಕ್ರೋಶ ಹೊರಹಾಕಿದರು.
ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರ ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾಮಗಾರಿಯ ಗುತ್ತಿಗೆಯನ್ನ ನೀಡುವ ವಿಚಾರದಲ್ಲಿ ಸಚಿವರ ಹಸ್ತಕ್ಷೇಪ ಇರುವುದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ ಎಂದು ಸುರೇಶ್ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ, ಒಂದು ವಾರ ಕೆಲಸ ನಿಲ್ಲಿಸಿ ಪ್ರತಿಭಟನೆ: ಮಂಜುನಾಥ್ ಎಚ್ಚರಿಕೆ
ಟೆಂಡರ್ ಕೊಡುವುದಕ್ಕೂ ಮಂತ್ರಿಗಳಿಗೂ (Ministers) ಏನು ಸಂಬಂಧ? ಪಾರದರ್ಶಕ ಕಾಯ್ದೆಯಡಿಯೇ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅರ್ಹ ಗುತ್ತಿಗೆದಾರರನ್ನು ಅಧಿಕಾರಿಗಳ ತಂಡ ಅಂತಿಮಗೊಳಿಸುತ್ತದೆ. ಇಡೀ ಟೆಂಡರ್ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬುದು ಗುತ್ತಿಗೆದಾರರ ಸಂಘದ ಮಂಜುನಾಥ್ ಅವರಿಗೂ ತಿಳಿದಿದೆ. ಆದಾಗ್ಯೂ, ಪದೇ ಪದೇ, ಮಂತ್ರಿಗಳ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜಲಜೀವನ್ ಮಿಷನ್‌ನಲ್ಲಿ ಅಕ್ರಮ – ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ ಗೋವಿಂದ ಕಾರಜೋಳ
ದಿನಂಪ್ರತಿ ಇದೇ ರೀತಿ ಆರೋಪಗಳನ್ನ ಮಾಡುತ್ತಾ ಬಂದರೆ ಇಲಾಖೆಗಳನ್ನು ನಡೆಸುವುದಾದರೂ ಹೇಗೆ? ಎಂದು ಪ್ರಶ್ನಿಸಿದ ಬೈರತಿ ಸುರೇಶ್ ಅವರು, ಈ ಪ್ರಕ್ರಿಯೆಗಳಲ್ಲಿ ಯಾರು ಭಾಗಿಯಾಗಿದ್ದಾರೆ ಮತ್ತು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದಾದರೂ ಸಾಕ್ಷ್ಯಾಧಾರಗಳಿದ್ದರೆ ಒದಗಿಸಲಿ. ವಿನಾಕಾರಣ ಆರೋಪಗಳನ್ನು ಮಾಡುವ ಮೂಲಕ ಗಾಳಿಯಲ್ಲಿ ಗುಂಡುಹಾರಿಸಿ ಸಾರ್ವಜನಿಕ ಜೀವನದಲ್ಲಿರುವವರ ತೇಜೋವಧೆ ಮಾಡುವುದು ಬೇಡ ಎಂದು ಸುರೇಶ್ ಕಿವಿಮಾತು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಬಾಕಿ ಇರುವ ಹಣವನ್ನ ಬಿಡುಗಡೆ ಮಾಡುವ ಬಗ್ಗೆ ಮಂಜುನಾಥ್ ಅವರು ನನ್ನ ಬಳಿ ಮನವಿ ಮಾಡಿದ್ದರು. ಹಣಕಾಸು ಇಲಾಖೆ ಅನುಮೋದನೆ ಪಡೆದು ಹಂತಹಂತವಾಗಿ ಬಾಕಿ ಇರುವ 200 ಕೋಟಿ ರೂಪಾಯಿ ಹಣವನ್ನ ಬಿಡುಗಡೆ ಮಾಡುವುದಾಗಿ ಭರವಸೆ ತಿಳಿಸಿದರು. ಇದನ್ನೂ ಓದಿ: Economic Survey| ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ, 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ ಮೀಸಲು


