– ಸೌಜನ್ಯ ಇರಲಿ, ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕೇ ಸಿಗುತ್ತೆ ಎಂದ ಸಚಿವ
ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಇರುವ ಪುಣ್ಯ ಕ್ಷೇತ್ರ. ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಒಟ್ಟಿನಲ್ಲಿ ಸೌಜನ್ಯ ಪ್ರಕರಣವಿರಲಿ (Soujanya Case) ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ಧರ್ಮಸ್ಥಳದಲ್ಲಿ (Dharmasthala) ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿದ್ದಾರೆ. ಅನುಮಾನಾಸ್ಪದ ಸಾವುಗಳ ಬಗ್ಗೆ ಎಸ್ಐಟಿ ತನಿಖೆ ಆಗಬೇಕು ಅಂತ ಒತ್ತಡ ಇತ್ತು. ದಕ್ಷಿಣ ಕನ್ನಡ ಪೊಲೀಸರು ತನಿಕೆಗೆ ಸಿದ್ಧವಿದ್ದರು ಅವರ ಮೇಲೆ ನಮಗೂ ನಂಬಿಕೆ ಇತ್ತು. ಇದೀಗ ಸಿಎಂ ಹಾಗೂ ಗೃಹ ಸಚಿವರು ಎಸ್ಐಟಿ ರಚಿಸಿ ಆದೇಶ ಮಾಡಿದ್ದಾರೆ ನಿಜಾಂಶ ಹೊರಗೆ ಬರಬೇಕು ನೂರಾರು ಹೆಣ ಅಂತ ಹೇಳ್ತಿದ್ದಾರೆ ಇದರ ಸತ್ಯಾಂಶ ಹೊರಗೆ ಬರಬೇಕು ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ | ಎಸ್‍ಐಟಿ ತನಿಖೆಗೆ ಸೌಜನ್ಯ ಕೇಸ್ ಇಲ್ಲ: ಪರಮೇಶ್ವರ್
ಅಲ್ಲದೇ ಸಾಕ್ಷಿದಾರ ಯಾರು? ಅವರ ಹಿನ್ನೆಲೆ ಏನು ಎಂಬುದರ ಹಿಂದೆ ಹೋಗಲು ಆಗುವುದಿಲ್ಲ. ಮೊದಲು ಹೆಣ ಹೂತು ಹಾಕಿದ್ದಾರೆ ಎನ್ನಲಾದ ಸ್ಥಳಕ್ಕೆ ಹೋಗಬೇಕು. ವಿಧಿವಿಜ್ಞಾನ ತನಿಖೆ ಆಗಬೇಕು ಇದೆಲ್ಲವನ್ನೂ ನೋಡಬೇಕು. ಯಾರೋ ಒಬ್ಬರ ಮೇಲೆ ಮಾಡಿದ್ದೀವಿ ಅಂತ ಹೇಳಲು ಆಗುವುದಿಲ್ಲ. ಕೇವಲ ಸೌಜನ್ಯ ಕೇಸ್ ಮಾತ್ರವಲ್ಲ, ಎಲ್ಲವನ್ನೂ ಕೂಲಂಕುಷವಾಗಿ ತನಿಖೆ ಮಾಡಬೇಕು. ಸಾಕ್ಷಿದಾರ ಠಾಣೆಗೆ ಬಂದು ಹೇಳಿಕೆ ಕೊಟ್ಟಾಗಲೇ ತನಿಖೆ ಮುಂದುವರಿಸಬಹುದಿತ್ತು. ಆದ್ರೆ ಎಸ್‌ಐಟಿ ಮಾಡಲೇಬೇಕು ಎನ್ನುವ ಒತ್ತಡವಿತ್ತು. ಅದರಂತೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ
ಇದರ ಹೊರತಾಗಿ ಧರ್ಮಸ್ಥಳ ಪುಣ್ಯಕ್ಷೇತ್ರ, ಯಾರೂ ಅದನ್ನ ಗುರಿಯಾಗಿಟ್ಟುಕೊಂಡು ತೇಜೋವಧೆ ಮಾಡಬಾರದು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಇರುವ ಕ್ಷೇತ್ರ, ಜೈನ ಸಮುದಾಯದವರೂ ಇರುವ ಕ್ಷೇತ್ರ ಹೀಗಾಗಿ ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಆದ್ರೆ ಜನರ ನಂಬಿಕೆಗಳಿಗೆ ಧಕ್ಕೆ ತರುವಂತ, ತೇಜೋವಧೆ ಮಾಡುವ ಕೆಲಸ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
ತನಿಖೆಯ ಮೇಲೆ ಯಾರೂ ಒತ್ತಡ ಹೇರಲು ಸಾಧ್ಯವಿಲ್ಲ, ತನಿಖೆಯಿಂದ ಯಾರೂ ಪ್ರಭಾವಿಗಳನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ. ಸೌಜನ್ಯ ಇರಲಿ ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಅಭಯ ನೀಡಿದರು. ಇದನ್ನೂ ಓದಿ: ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು