ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲದ ಬಗ್ಗೆ ಚಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮುಂಬೈಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ ಅವರು, ನಾನು ನೀರಾವರಿ ಇಲಾಖೆಯ ಕಾರ್ಯದ ನಿಮಿತ್ತ ಇಂದು ಔರಾಂಗಬಾದ್‍ಗೆ ಹೋಗುತ್ತೇನೆ ಎಂದು ತಿಳಿಸಿದ್ದರು. ಆದರೆ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ಸಚಿವ ಡಿ.ಕೆ. ಶಿವಕುಮಾರ್ ಮುಂಬೈಗೆ ಹೋಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಡಿ.ಕೆ. ಶಿವಕುಮಾರ್ ಕಳೆದ ದಿನವೇ ನಿರಾವರಿ ಇಲಾಖೆಗೆ ಸಂಬಂಧಿಸಿದ ಸಮಾವೇಶಕ್ಕೆ ಮುಂಬೈಗೆ ಹೋಗಬೇಕಿತ್ತು. ಆದರೆ ಕಾರಣಾಂತರದಿಂದ ಅದನ್ನು ಮುಂದೂಡಿದ್ದರು. ಆದರೆ ಇಂದು ಮುಂಬೈಗೆ ಹೋಗಿ ಇಲಾಖೆಯ ಕೆಲಸದ ನಿಮಿತ್ತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಲ್ಲಿಂದ ಆಪರೇಷನ್ ಕಮಲಕ್ಕೆ ಒಳಗಾಗಿರುವ ಶಾಸಕರ ಮನವೊಲಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಂಬೈನ ಹೋಟೆಲ್‍ನಲ್ಲಿ ಕಾಂಗ್ರೆಸ್ ಶಾಸಕರು ಬಿಜೆಪಿ ಕಬ್ಜಾದಲ್ಲಿದ್ದಾರೆ. ಈಗಾಗಲೇ ದೆಹಲಿನಲ್ಲಿ ನಡೆಯುತ್ತಿರುವ ಆಪರೇಷನ್ ಕಮಲದಿಂದ ಪಕ್ಷೇತರ ಇಬ್ಬರು ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ತಮ್ಮ ಬೆಂಬಲವನ್ನು ಹಿಂಪಡೆದಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv