ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್‍ನಲ್ಲಿ 100% ಹಾಗೂ ಎರಡನೇ ಡೋಸ್‍ನಲ್ಲಿ 85.3% ಪ್ರಗತಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15-17 ವರ್ಷದ ಮಕ್ಕಳಲ್ಲಿ ಶೇ.67.5% ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ. ಒಟ್ಟು 9,33,92,626 ಡೋಸ್‍ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಉತ್ತಮ ಪ್ರಗತಿಯಲ್ಲಿದೆ ಎಂದು ಹೇಳಿದರು.

ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಏರುತ್ತಿದೆ. ಮತ್ತೆ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ ಎಂದ ಅವರು, ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಹೆಚ್ಚು ಆಸ್ಪತ್ರೆ ದಾಖಲಾತಿ ಕಂಡು ಬರುವಲ್ಲಿ ಕ್ರಮ ವಹಿಸಲಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದೆ. ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.

ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.

ಭ್ರೂಣ ಪತ್ತೆ ಮಾಡುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಸಮಾನತೆ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಹಾಗೂ ಲಿಂಗ ಸಮಾನತೆ ತರಲು ಪ್ರಯತ್ನಿಸಬೇಕಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ

ಕೆಲ ವರ್ಷಗಳಿಂದ ಲಿಂಗಾನುಪಾತವೂ ಹೆಚ್ಚಾಗಿದೆ. 2001ರಲ್ಲಿ 946 ಇದ್ದ ಲಿಂಗಾನುಪಾತ, 2018ರಲ್ಲಿ 957ಕ್ಕೇರಿದೆ. ಅಂದರೆ, ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ. ಅವರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ: ಬೊಮ್ಮಾಯಿ

ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವ ತಜ್ಞರು, ತಾಂತ್ರಿಕ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರವಾನಗಿಯನ್ನು ರದ್ದು ಮಾಡಲಾಗುವುದು. ಭ್ರೂಣ ಪತ್ತೆಗೆ ಅವಕಾಶ ನೀಡುವುದಿಲ್ಲ ಎಂದರು. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

Share This Article
Leave a Comment

Leave a Reply

Your email address will not be published. Required fields are marked *