ಪಾಸ್‌ಪೋರ್ಟ್ ಕ್ಯಾನ್ಸಲ್ ಆಗುವುದನ್ನು ತಿಳಿದು ಪ್ರಜ್ವಲ್ ವಾಪಸ್: ಗೃಹ ಸಚಿವ ಪರಮೇಶ್ವರ್

Public TV
1 Min Read

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರ ಸಂಸದ ಸ್ಥಾನ ಅಂತ್ಯವಾಗಲಿದೆ. ಸಂಸದ ಸ್ಥಾನ ಅಂತ್ಯವಾದರೆ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಕ್ಯಾನ್ಸಲ್ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ತನಿಖೆಗಾಗಿ ಎಸ್‌ಐಟಿ (SIT) ಎಲ್ಲ ಪ್ರಯತ್ನ ಮಾಡುತ್ತಿದೆ. ವಾರೆಂಟ್ ಮೂಲಕ ಕೇಂದ್ರ ವಿದೇಶಾಂಗ ಇಲಾಖೆಗೆ ತಿಳಿಸಿದ್ದೇವೆ. ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೂ ಗೊತ್ತಿದೆ. ಆದರೀಗ ಅವರ ಪಾಸ್‌ಪೋರ್ಟ್ ರದ್ದಾಗುವ ಹಿನ್ನೆಲೆಯಲ್ಲಿ ಎಲ್ಲವನ್ನೂ ತಿಳಿದು ವಾಪಸ್ ಬರುತ್ತೇನೆ ಅಂತಾ ವೀಡಿಯೋ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ವೀಡಿಯೋ ಬಂದಿದ್ದು ಯಾವ ದೇಶದಿಂದ – ಪ್ರಜ್ವಲ್‌ ವೀಡಿಯೋ ಬೆನ್ನತ್ತಿದ ಎಸ್‌ಐಟಿ

ಇದೇ ವೇಳೆ ಕಾಂಗ್ರೆಸ್ ಷಡ್ಯಂತ್ರ ಮಾಡಿದೆ ಎಂಬ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಅದೆನ್ನೆಲ್ಲಾ ನೋಡೋಣ. ಎಸ್‌ಐಟಿ ಅವರು ಗಮನಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ರಾಜ್ಯಕ್ಕೆ ಮೇ 31 ರಂದು ವಾಪಸ್‌ ಬರುವುದಾಗಿ ವೀಡಿಯೋ ಮೂಲಕ ಸಂಸದ ಪ್ರಜ್ವಲ್‌ ರೇವಣ್ಣ ತಿಳಿಸಿದ್ದಾರೆ. ತಂದೆ-ತಾಯಿ, ಕುಟುಂಬ ಹಾಗೂ ರಾಜ್ಯದ ಜನತೆಗೆ ಕ್ಷಮೆಯಾಚಿಸಿದ ಸಂಸದ, ಆರೋಪಗಳು ರಾಜಕೀಯ ಷಡ್ಯಂತ್ರ ಎಂದಿದ್ದಾರೆ. ರಾಜ್ಯಕ್ಕೆ ವಾಪಸ್‌ ಆಗಿ ಎಸ್‌ಐಟಿ ವಿಚಾರಣೆ ಎದುರಿಸಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಡಿಕೇರಿಯಲ್ಲಿ 5 ವರ್ಷ ಕಳೆದರೂ ನೆರೆಸಂತ್ರಸ್ತರಿಗೆ ಸಿಗದ ಶಾಶ್ವತ ಸೂರು – ಸರ್ಕಾರದ ವಿರುದ್ಧ ಆಕ್ರೋಶ

Share This Article