ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

Public TV
1 Min Read

ಗದಗ: ನಗರದ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಅನ್ನು ಶುಕ್ರವಾರ ಕಾನೂನು, ನ್ಯಾಯ, ಪ್ರವಾಸೋದ್ಯಮ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು ಈ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ (Indira Canteen) ತೆರೆದಿದ್ದರಿಂದ ಗ್ರಾಮೀಣ ಭಾಗದವರಿಗೆ ತುಂಬಾನೇ ಅನುಕೂಲ ಆಗಲಿದೆ. ನಗರದ ಬಸ್ ನಿಲ್ದಾಣಕ್ಕೆ ಗದಗ ತಾಲೂಕು ಅಷ್ಟೇ ಅಲ್ಲ, ಬೇರೆ ಬೇರೆ ತಾಲೂಕಿನ ಜನರು ಬರುತ್ತಾರೆ. ಅವರಿಗೆ ಕಡಿಮೆ ಹಣದಲ್ಲಿ ಊಟ, ಉಪಹಾರ ಸಿಗುತ್ತೆ. ಹಾಗಾಗಿ ಇಲ್ಲಿಗೆ ಈ ಇಂದಿರಾ ಕ್ಯಾಂಟೀನ್‌ನ ಅವಶ್ಯಕತೆ ಇತ್ತು ಎಂದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

ನಂತರ ಹೆಚ್.ಕೆ ಪಾಟೀಲ್ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ನೂತನ ಇಂದಿರಾ ಕ್ಯಾಂಟೀನ್‌ನಲ್ಲಿ ಉಪಹಾರ ಸೇವಿಸಿದರು. ಇದನ್ನೂ ಓದಿ: ಬನ್ನೇರುಘಟ್ಟ ಸಫಾರಿ ವೇಳೆ ಬೊಲೆರೋ ಹಿಂಬಾಲಿಸಿ ಬಾಲಕನ ಮೇಲೆ ಚಿರತೆ ದಾಳಿ

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಕ್ಬರ್‌ಸಾಬ್ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್ ಸೇರಿ ಅನೇಕರು ಉಪಸ್ಥಿತರಿದ್ದರು.

Share This Article