ನಾಗಮಂಗಲದಲ್ಲಿ 78 ವಾಣಿಜ್ಯ ಮಳಿಗೆಗಳ ಲೋಕಾರ್ಪಣೆ ಮಾಡಿದ ಸಚಿವ ಕೆ.ಗೋಪಾಲಯ್ಯ

Public TV
1 Min Read

ಮಂಡ್ಯ: ಹತ್ತಣೆ ಹಣಕಾಸು ಯೋಜನೆ ಮತ್ತು ಎಸ್‍ಎಫ್‍ಸಿ ಅನುದಾನಡಿ 3.60 ಕೋಟಿ ರೂ. ವೆಚ್ಚದಲ್ಲಿ ಪುರಸಭೆಯಿಂದ ನಿರ್ಮಾಣ ಮಾಡಿರುವ ವಾಣಿಜ್ಯ ಸಂಕೀರ್ಣಗಳನ್ನು ಪುರಸಭಾ ಆವರಣದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಗಮಂಗಲ ಪಟ್ಟಣ ಮತ್ತು ಈ ಭಾಗದ ಸುತ್ತ ಮುತ್ತಲ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 78 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದ್ದು, ಜನರ ಉಪಯೋಗಕ್ಕೆ ಈ ಮಳಿಗೆಗಳು ದೊರಕುವಂತಾಗಲಿ ಎಂದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

ಜಿಲ್ಲೆಯಲ್ಲಿ ದೇವರಾಜು ಅರಸು ವಸತಿ ನಿಲಯ, ಪೊಲೀಸ್ ವಸತಿ ನಿಲಯ ಮತ್ತು ವಾಣಿಜ್ಯ ಸಂಕೀರ್ಣ ಹೀಗೆ ಒಂದೇ ದಿನ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡರು, ಶಾಸಕರಾದ ಸುರೇಶ್ ಗೌಡರು ಮತ್ತು ನಾನು ಮೂವರು ಸೇರಿಕೊಂಡು ಸರ್ಕಾರದ ಅನುದಾನವನ್ನು ತಂದು ಮಂಡ್ಯ ಜಿಲ್ಲೆಯ ಸಮಗ್ರ ಚಿತ್ರಣವನ್ನು ಬದಲಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಎನ್.ಜಿ.ಆಶಾ, ಉಪಾಧ್ಯಕ್ಷ ಜಾಫರ್ ಷರೀಫ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಸಿ.ಚನ್ನಪ್ಪ, ರಾಜ್ಯ ಪೌರಾಡಳಿತ ನಿರ್ದೇಶಕಿ ಎಂ.ಎಸ್.ಅರ್ಚನಾ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ, ಎಸ್ಪಿ ಎನ್.ಯತೀಶ್ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ

Share This Article
Leave a Comment

Leave a Reply

Your email address will not be published. Required fields are marked *