ಹುಬ್ಬಳ್ಳಿ: ಸಚಿವ ಸ್ಥಾನ ಧಾರಾಳವಾಗಿ ಬಿಟ್ಟು, ಪಕ್ಷದ ಸಂಘಟನೆಗಾಗಿ ದುಡಿಯಲು ಸಿದ್ಧನಿದ್ದೇನೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಸಂಪುಟದಲ್ಲಿ ಹಿರಿಯರನ್ನು ಕೈಬಿಡಬೇಕೆಂದು ರೇಣುಕಾಚಾರ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಂಪುಟದಿಂದ ನನ್ನನ್ನು ಕೈ ಬಿಡುವುದಿದ್ದರೆ ನಾನು ಸಹ ತಯಾರಿದ್ದೇನೆ. ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಅಧಿಕಾರ ಎಷ್ಟರ ಮಟ್ಟಿಗೆ ಒಳ್ಳೆಯದು ಹಾಗೂ ಕೆಟ್ಟದು ಎನ್ನುವುದು ನನಗೆ ಗೊತ್ತು ಎಂದರು.
ಕಾರ್ಯಕಾರಿಣಿಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ದೊಡ್ಡ ಗೆಲುವಾಗಿದೆ. ಇದಕ್ಕಾಗಿ ರಾಜ್ಯದ ಜನರಿಗೆ ವಿಶೇಷ ಅಭಿನಂದನೆ ಸಲ್ಲಿಸಬೇಕು. ಸಿಂದಗಿ ಉಪಚುನಾವಣೆ ಅತಿ ಹೆಚ್ಚು ಮತಗಳನ್ನು ಕೊಟ್ಟಿದ್ದಕ್ಕೆ ಜನರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಇದನ್ನೂ ಓದಿ: ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣ’
ಜ. 5ರಂದು ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಲ್ಲಿ ನಾವು ಮುಂದಿನ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪಕ್ಷ ಬಲಿಷ್ಠವಾಗಬೇಕೆಂಬ ವರಿಷ್ಠರ ನಿರೀಕ್ಷೆಯನ್ನು ಹುಸಿಗೊಳಿಸಲ್ಲ: ಬೊಮ್ಮಾಯಿ