ಧರ್ಮಸ್ಥಳ ಪ್ರಕರಣ | ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಮಾಡಲಾಗುತ್ತಿದೆ: ಲಕ್ಷ್ಮಿ ಹೆಬ್ಬಾಳ್ಕರ್‌

Public TV
1 Min Read

– ಡಿಸಿಎಂ ಡಿಕೆಶಿ ಬೆಂಬಲಿಸಿದ ಸಚಿವೆ
– ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ ಎಂದಿದ್ದ ಡಿಕೆಶಿ

ಬೆಂಗಳೂರು: ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ (Dharmasthala Case) ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ (Dharmasthala) ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು. ಇದನ್ನೂ ಓದಿ: ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್‌ಐಟಿ ತನಿಖೆ ಬಗ್ಗೆ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಿಗೂಢ ಸ್ಫೋಟ | ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಮಾಡಲಾಗುತ್ತಿದೆ. ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ, ನ್ಯಾಯ ಸಿಗಬೇಕು. ಆದ್ರೆ ಮುಸುಕುದಾರಿ ಬೇರೆ ಬೇರೆ ಸ್ಥಳವನ್ನ ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲಾ ಉತ್ತರ ಸಿಗಬೇಕು ಎಂದೇ ಎಸ್‌ಐಟಿ ರಚನೆಯಾಗಿದೆ. ಆದಷ್ಟು ಬೇಗ ಉತ್ತರ ಸಿಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಇದನ್ನೂ ಓದಿ: 500 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಹೊರಟ ಬಿಜೆಪಿ ಕಾರ್ಯಕರ್ತರು!

Share This Article