ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡಲ್ಲ: ಹೆಬ್ಬಾಳ್ಕರ್‌

Public TV
1 Min Read

ಬೆಳಗಾವಿ: ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡಲ್ಲ. ನನಗೆ ನಾಸಿರ್‌ ಸಾಬ್‌ ಜಿಂದಾಬಾದ್‌ ಎಂದೇ ನನಗೆ ಕೇಳಿಸಿದೆ ಎಂದು ಹೇಳುವ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತೆ ಸಮರ್ಥಿಸಿಕೊಂಡಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರನ್ನು ಬಂಧನ ಮಾಡಿರುವ ಕುರಿತು ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ಮೂವರ ಬಂಧನ ಆಗಿದೆ. ನಾನು ನನ್ನ ಪಿಆರ್ ಕಡೆಯಿಂದ ಮಾಹಿತಿ ಪಡೆದಿದ್ದೇನೆ. ಏನು ಹೇಳಿಕೆ ಕೊಡಬೇಕು ಎಂಬುದರ ಬಗ್ಗೆ ನಾನು ಹೋಮ್ ಮಿನಿಸ್ಟರ್ ಬಳಿ ಮಾತನಾಡುತ್ತೇನೆ ಎಂದರು.

ಒಂದಂತು ನಿಜ ಯಾರೇ ಆಗಿರಲಿ ನಮ್ಮ ದೇಶ ವಿರುದ್ಧವಾಗಿ ಹೇಳಿದರೆ ಅವರಿಗೆ ಕಠಿಣವಾಗಿ ಕ್ರಮ ಆಗಲೇ ಬೇಕು. ನಾನು ಅದಕ್ಕೆ ಸಹಮತವನ್ನು ವ್ಯಕ್ತಪಡಿಸುತ್ತೇವೆ‌. ಏಕೆಂದರೆ ದೇಶದ್ರೋಹಿಗಳನ್ನು ಅರಗಿಸಿಕೊಳ್ಳಲು ನಮ್ಮಿಂದ ಸಾಧ್ಯವಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಅನೇಕ ಬಲಿದಾನ ನೀಡಿದ ಪಕ್ಷ ನಮ್ಮದು. ಪಕ್ಷದ ಚೌಕಟ್ಟಿನಲ್ಲಿ ನಾವೆಲ್ಲರೂ ಬದ್ಧರಿದ್ದೇವೆ. ಹೊಟ್ಟೆಗೆ ಅನ್ನ ತಿಂದವರು ಇಂಥದ್ದನ್ನು ಮಾಡುವುದಿಲ್ಲ ಎಂದು ಸಚಿವೆ ಪುಣರುಚ್ಚರಿಸಿದ್ದಾರೆ. ಇದನ್ನೂ ಓದಿ: ಮೂವರನ್ನು ಯಾಕೆ ಅರೆಸ್ಟ್ ಮಾಡಿದ್ದಾರೆ ಗೊತ್ತಿಲ್ಲ: ಪ್ರಿಯಾಂಕ್‌ ಖರ್ಗೆ

ಆರೋಪಿಗಳ ಪತ್ತೆಗೆ ಭಾರೀ ಕಸರತ್ತು: ಪೊಲೀಸರಿಂದ ವೀಡಿಯೋ ಆಧಾರಗಳನ್ನು ಪಡೆದಿದ್ದ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಆರೋಪಿಗಳ ಪತ್ತೆಗೆ ಭಾರೀ ಕಸರತ್ತು ನಡೆಸಿತ್ತು. 15 ಧ್ವನಿ ಮಾದರಿಗಳನ್ನ ಸಂಗ್ರಹಿಸಿತ್ತು. ಪ್ರತಿಯೊಂದು ಧ್ವನಿಗಳನ್ನು ಆಲಿಸುವ ಮೂಲಕ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿತ್ತು. ಕೊನೆಗೆ 15 ಜನರಲ್ಲಿ ಮೂವರು ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬುದನ್ನು ವರದಿಯಲ್ಲಿ ದೃಢಪಡಿಸಿತು. ಈ ಬೆನ್ನಲ್ಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Share This Article