ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

1 Min Read

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದು ಬಿಡಬೇಕು ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಒತ್ತಾಯಿಸಿದರು.

ವಿಜಯಪುರದ (Vijayapura) ಆಲಮಟ್ಟಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಮಂತರು ಗ್ಯಾರಂಟಿ (Guarantee Scheme) ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎನ್ನುವ ಡಿಕೆ ಸುರೇಶ್‌ ಹೇಳಿಕೆಯನ್ನ ಸಮರ್ಥಿಸಿಕೊಂಡರು. ಸ್ವಯಂ ಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ ಯೋಜನೆ ಲಾಭ ಪಡೆಯೋದು ಬಿಡಬೇಕು ಅಂತ ನಾನೂ ಒತ್ತಾಯಿಸುತ್ತೇನೆ ಎಂದರು.

ಶ್ರೀಮಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುತ್ತಿದ್ದರೆ ಬಿಡಬೇಕು. ಅರ್ಹ ಬಿಪಿಎಲ್ ಕುಟುಂಬದವರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳಲಿ. ಶ್ರೀಮಂತರು ಗ್ಯಾರಂಟಿ ಯೋಜನೆ ತಗೆದುಕೊಳ್ಳೋದು ಆಗಬಾರದು ಅನ್ನೋದು ನನ್ನ ಅಭಿಪ್ರಾಯವೂ ಹೌದು ಎಂದು ತಿಳಿಸಿದರು.

ಇನ್ನೂ ಗ್ಯಾರಂಟಿ ಯೋಜನೆ ರಾಜ್ಯ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎನ್ನುವ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಆಗುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಅಭಿವೃದ್ಧಿಯ ಒಂದು ಭಾಗ. ಗೃಹಲಕ್ಷ್ಮಿ, ಶಕ್ತಿ ಯೋಜನೆಗಳು ಅಭಿವೃದ್ಧಿ ಒಂದು ಭಾಗ. ಆದ್ರೆ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುವುದಿಲ್ಲ. ನಮ್ಮ ಮುಖ್ಯಮಂತ್ರಿಗಳು ಹಣಕಾಸಿನ ತಜ್ಞರಿದ್ದಾರೆ. 16 ಬಜೆಟ್ ಕೊಟ್ಟಿದ್ದಾರೆ, ಸಮರ್ಥವಾಗಿ ಮ್ಯಾನೇಜ್ ಮಾಡುತ್ತಾರೆ ಎಂದು ಸಮರ್ಥಿಸಿಕೊಂಡರು.

Share This Article