ವೃಷಭಾವತಿ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್ ಬೋಸರಾಜು ಸೂಚನೆ

Public TV
1 Min Read

ಬೆಂಗಳೂರು: ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ವೃಷಭಾವತಿ ಏತ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು (N S Bosaraju) ಸೂಚನೆ ನೀಡಿದ್ದಾರೆ.

ಮಂಗಳವಾರ ವೃಷಭಾವತಿ (Vrishabhavathi) ಏತ ನೀರಾವರಿ ಯೋಜನೆ ಕಾಮಗಾರಿ ಪ್ರದೇಶಗಳಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಯಂಡಹಳ್ಳಿ ಎಸ್‌ಟಿಪಿ, ಹುಸ್ಕೂರು ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಕಾಮಗಾರಿ, ಗೊಲ್ಲಹಳ್ಳಿ ಪೈಪ್‌ಯಾರ್ಡ್ ಮತ್ತು ಮಾಕಳಿ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದರು.ಇದನ್ನೂ ಓದಿ: ‘ಗದಾಧಾರಿ ಹನುಮಾನ್’ ಶೀರ್ಷಿಕೆ ರಿಲೀಸ್: ರವಿ ಚಿತ್ರದ ನಾಯಕ

ಭೇಟಿ ನೀಡಿ ಮಾತನಾಡಿದ ಅವರು, ಬಯಲು ಸೀಮೆಯ ಜಿಲ್ಲೆಗಳಲ್ಲಿ ಅಂತರ್ಜಲ ಹೆಚ್ಚಳಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಯೋಜಿಸಲಾಗಿರುವ ಮಹತ್ವಕಾಂಕ್ಷಿ ಯೋಜನೆ ಇದಾಗಿದೆ. ಮಾರ್ಚ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದಕ್ಕೆ ಚಾಲನೆ ನೀಡಿದ್ದರು.

ಈ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಕೆರೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ನಿರ್ಮಿಸಬೇಕು.ಸ ಈ ಯೋಜನೆಯ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಜಾಕ್‌ವೆಲ್, ಪೈಪ್‌ಲೈನ್‌ಗಳ ಗುಣಮಟ್ಟದ ಬಗ್ಗೆಯೂ ನಿಗಾ ವಹಿಸಬೇಕು ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಮುಂದಿನ ಕಾನೂನು ಹೋರಾಟದ ಬಗ್ಗೆ ಪತ್ನಿ ಜೊತೆ ಚರ್ಚೆ – ಬುಧವಾರ ಜೈಲಿಗೆ ಬರುವಂತೆ ಹೇಳಿದ ದರ್ಶನ್‌

ಈ ಸಂದರ್ಭದಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್, ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article