ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು – ಪ್ರಿಯಾಂಕ್‌ ಖರ್ಗೆ ತಿರುಗೇಟು

Public TV
2 Min Read

– ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ ತಿರುಗೇಟು

ಕಲಬುರಗಿ: ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು ಅಂತಾ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಾಜಿ ಸಚಿವ ಆರಗ ಜ್ಞಾನೇಂದ್ರಗೆ (Araga Jnanendra) ತಿರುಗೇಟು ನೀಡಿದ್ದಾರೆ.

ಬಿಜೆಪಿ ಪ್ರತಿಭಟನೆ (BJP Protest) ವೇಳೆ ʻಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆಯವರನ್ನ ನೋಡಿದರೆ ಗೊತ್ತಾಗುತ್ತದೆʼ ಎಂದು ಅವಹೇಳನ ಮಾಡಿದ್ದ ಆರಗ ಜ್ಞಾನೇಂದ್ರ ಹೇಳಿಕೆಗೆ ಟ್ವಿಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಶತ-ಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು. ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ ಎಂದು ಕುಟುಕಿದ್ದಾರೆ.

ಆರಗ ಜ್ಞಾನೇಂದ್ರ ಹೇಳಿಕೆಗೆ ಕಾಂಗ್ರೆಸ್‌ ನಾಯಕರೂ ಕೆಂಡಾಮಂಡಲವಾಗಿದ್ದರು. ಬಿಜೆಪಿ ಶಾಸಕರ ವಿರುದ್ಧ ಕಟು ಮಾತುಗಳಿಂದ ಖಂಡಿಸಿದ್ದರು. ಜೊತೆಗೆ, ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಇದನ್ನೂ ಓದಿ: ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್, ಹೈಕಮಾಂಡ್ ಕಂಟ್ರೋಲ್: ಬೊಮ್ಮಾಯಿ

ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್‌ ಖರ್ಗೆ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ. ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ ಎಂದಿದ್ದಾರೆ.  

ಮನುಸ್ಮೃತಿಯ ವರ್ಣಾಶ್ರಮವನ್ನ ಅಪ್ಪಿ-ಒಪ್ಪಿ ಮುದ್ದಾಡುವ ಬಿಜೆಪಿ, ದಲಿತರ ರಾಜಕೀಯ (Dalit Politics) ಏಳಿಗೆ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. ಕರ್ನಾಟಕ ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ. ಏಕೆಂದರೆ ಇದು ಮನುಸ್ಮೃತಿಯ ಕಾಲವಲ್ಲ, ಬಾಬಾಸಾಹೇಬರ ಸಂವಿಧಾನದ ಕಾಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರಾಟ – ಅಪ್ರಾಪ್ತರನ್ನೇ ಟಾರ್ಗೆಟ್‌ ಮಾಡ್ತಿದ್ದ ಗ್ಯಾಂಗ್‌ ಬಂಧನ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್