ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

Public TV
1 Min Read

ರಾಯಚೂರು: ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮಂತ್ರಾಲಯಕ್ಕೆ (Mantralayam) ಭೇಟಿ ನೀಡಿ ರಾಯರ ಮೂಲ ಬೃಂದಾವನದ ದರ್ಶನ ಪಡೆದಿದ್ದಾರೆ. ಮಂಚಾಲಮ್ಮ ದೇವಿ ದರ್ಶನ ಬಳಿಕ ರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳನ್ನ ಭೇಟಿ ಮಾಡಿ ಆಶಿರ್ವಚನ ಪಡೆದರು. ಸಚಿವರಿಗೆ ಫಲಮಂತ್ರಾಕ್ಷತೆ, ಶೇಷವಸ್ತ್ರ ಸ್ಮರಣಿಕೆಯನ್ನು ನೀಡಿ ಶ್ರೀಗಳು ಆಶೀರ್ವದಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ರಾಯರ ಆರಾಧನಾ ಮಹೋತ್ಸವಕ್ಕೆ ಶ್ರೀಗಳು ಇದೇ ವೇಳೆ ಆಹ್ವಾನಿಸಿದ್ದಾರೆ‌. ಇದನ್ನೂ ಓದಿ: `ಎಕ್ಕ’ ಸಿನಿಮಾ ರಿಲೀಸ್‌ಗೆ ದಿನಗಣನೆ – ಮಂತ್ರಾಲಯ ರಾಯರ ದರ್ಶನ ಪಡೆದ ಯುವ ರಾಜ್‌ಕುಮಾರ್

ಬಳಿಕ ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಅದ್ದೂರಿಯಾಗಿ ನಡೆದ ಮೃತ್ತಿಕಾ ಸಂಗ್ರಹ ಮಹೋತ್ಸವ

Share This Article