ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ: ಎಸ್.ಟಿ.ಸೋಮಶೇಖರ್

Public TV
1 Min Read

ಮೈಸೂರು: ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

chamundi betta

ಚಾಮುಂಡಿಬೆಟ್ಟದ ನಂದಿ ಮಾರ್ಗದಲ್ಲಿ ಕಳೆದ ವಾರ ಭೂಕುಸಿತವಾಗಿದ್ದ ಸ್ಥಳಕ್ಕೆ ಸಚಿವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಕುಸಿತದ ಕುರಿತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಜೊತೆ ಮಾತನಾಡಲಾಗಿದೆ. ದೀಪಾವಳಿ ನಂತರ ಅವರು ಸಹ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವಸ್ತುಸ್ಥಿತಿ ತಿಳಿದುಕೊಳ್ಳಲು ಇಂದು ನಾನು ಭೇಟಿ ನೀಡಿದ್ದೇನೆ. ಹೆಚ್ಚು ಹಾನಿಯಾಗಿದ್ದು ಈ ಕೂಡಲೇ ಪರಿಹಾರ ಕಾರ್ಯಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮೊದಲು ಮಳೆ ಹಾನಿ ಕುರಿತಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲು ಜಿಪಂ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸಚಿವರು, ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರು ಕೂಡ ಒಟ್ಟಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಳೆ ಹಾನಿ ಕುರಿತು ಅವರ ಗಮನಕ್ಕೆ ತರೋಣ ಎಂದರು. ಇದನ್ನೂ ಓದಿ: ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ

chamundi hill

147.96 ಎಕರೆ ಬೆಳೆ ಹಾನಿ, 214.97 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದರೆ ಅಂದಾಜು 700 ಕಿ.ಮೀ.ನಷ್ಟು ರಸ್ತೆ ಹಾಳಾಗಿದೆ. 67 ಪ್ರಾಥಮಿಕ ಶಾಲೆಗಳು, 33 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ಮುಂದಿನ ವರ್ಷ ಜಿಲ್ಲಾ, ರಾಜ್ಯೋತ್ಸವ ಪ್ರಶಸ್ತಿಗೆ ಏಕರೂಪ ನಿಯಮ: ಸುನಿಲ್ ಕುಮಾರ್

ಈ ಸಂದರ್ಭದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಡಿಸಿಪಿ ಗೀತಾ ಪ್ರಸನ್ನ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *