ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕೆ ಕಾಯುತ್ತಾರೆ- ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ

Public TV
1 Min Read

ಚಿಕ್ಕೋಡಿ (ಬೆಳಗಾವಿ): ಇತ್ತೀಚೆಗಷ್ಟೆ ರೈತರಿಗೆ (Farmers) ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ (Shivanand Patil) ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಪರಿಹಾರ ಕೊಡೋಕೆ ಶುರು ಮಾಡಿದ್ಮೇಲೆ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ: ಶಿವಾನಂದ ಪಾಟೀಲ್

ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಗುತ್ತೆ ಅಂತಾ. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಆದ್ರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ. ಸರ್ಕಾರ ಸದಾ ನರೆವಿಗೆ ಬರಲು ಸಾಧ್ಯವಿಲ್ಲ ಎಂದು ಸಚಿವರು ಮಾತನಾಡಿದ್ದಾರೆ.

Share This Article