ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದಾರೆ ಎಂಬುದೇ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ತಾಲಿಬಾನ್ ಗೊತ್ತಿಲ್ಲ, ಬಿಜೆಪಿ ಗೊತ್ತಿಲ್ಲ. ಯಾವುದಕ್ಕೂ ಯಾವ ಸಂಬಂಧವೂ ಇಲ್ಲದೆ ಏನೇನೋ ಮಾತನಾಡುತ್ತಿದ್ದಾರೆ. ಆರ್.ಎಸ್.ಎಸ್ ಬಗ್ಗೆ ತಿಳಿಯಬೇಕಾದರೆ ಯಾವುದಾದರು ಆರ್.ಎಸ್.ಎಸ್ ಶಾಖೆಗೆ ಬರಲಿ. ಅವರು ಶಾಖೆಗೆ ಬರುವುದಾದರೆ ನಾನೇ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇನೆ ಎಂದರು. ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು
ಸಿದ್ದರಾಮಯ್ಯನವರಿಗೆ ಮಾನಸಿಕವಾಗಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಮಾನಸಿಕವಾಗಿ ಏನಾಗಿದೆ ಎಂಬುದು ತಿಳಿಯುತ್ತಿಲ್ಲ. ಬೇಕಾದರೆ ತಿಳಿದುಕೊಂಡು ಹೇಳುತ್ತೇನೆ ಎಂದು ತಿಳಿಸಿದರು.