ಸತೀಶ್ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿಪಡೆ- ಸುನಿಲ್ ಕುಮಾರ್‌ರಿಂದ ಸ್ವಾಭಿಮಾನಿ ಹಿಂದು ಅಭಿಯಾನ

Public TV
3 Min Read

ಬೆಂಗಳೂರು: ಸತೀಶ್ ಜಾರಕಿಹೊಳಿ (Satish Jarakiholi) ಹೇಳಿಕೆ ವಿರುದ್ಧ ಕೇಸರಿಪಡೆ ಸಿಡಿದೆದ್ದಿದ್ದು, ಸಚಿವ ಸುನೀಲ್ ಕುಮಾರ್ (Sunil Kumar) ‘ಸ್ವಾಭಿಮಾನಿ ಹಿಂದು’ ಅಭಿಯಾನ ಆರಂಭಿಸಿದ್ದಾರೆ.

ಈ ಸಂಬಂಧ ಟ್ವೀಟ್ (Tweet) ಮಾಡಿರುವ ಅವರು, ಕಾಂಗ್ರೆಸ್ (Congress) ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು (Jawaharlal Nehru) ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: `ಹಿಂದೂ’ ಭಾರತೀಯ ಪದವೇ ಅಲ್ಲ, ನಾನು ಹೇಳಿದ್ದರಲ್ಲಿ ತಪ್ಪಿಲ್ಲ: ಸತೀಶ್ ಜಾರಕಿಹೊಳಿ

– ಸತೀಶ್ ಜಾರಕಿಹೊಳಿಗೆ ಹಿಂದು ಶಬ್ದ ಅಶ್ಲೀಲ.
– ಸಿದ್ದರಾಮಯ್ಯ ಅವರಿಗೆ ಕೇಸರಿ-ತಿಲಕ ಕಂಡರೆ ಭಯ
– ದೈವಾರಾಧನೆ ಹಾಗೂ ತೀರ್ಥ ಬಿ.ಟಿ.ಲಲಿತಾನಾಯಕರಿಗೆ ವಾಕರಿ ತರಿಸುತ್ತದೆ
– ಡಿ.ಕೆ.ಶಿವಕುಮಾರ್ ಗೆ ಮುಸ್ಲಿಂರು ಸೋದರರು
– ಎಂ.ಬಿ.ಪಾಟೀಲರಿಗೆ ಹಿಂದು ಧರ್ಮದ ಅಖಂಡತೆ ಒಡೆಯುವ ಯೋಚನೆ
– ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಗೆ ಭಗವದ್ಗೀತೆ ಜಿಹಾದ್ ಆಗಿ ಕಾಣುತ್ತದೆ

ಇವೆಲ್ಲವೂ ಕಾಂಗ್ರೆಸ್ ಒಳಮನಸಿನಲ್ಲಿರುವ ಹಿಂದು ವಿರೋಧಿ ಭಾವಗಳು ಎಂದು ಟೀಕೆ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆ ಹೆಸರಿನಲ್ಲಿ ರಾಹುಲ್ ಗಾಂಧಿ ನಡೆಸಿದ ಪಾದಯಾತ್ರೆಯ ಬಳಿಕ ಕಾಂಗ್ರೆಸ್ ನಾಯಕರ ಹಿಂದು ವಿರೋಧಿ ಹೇಳಿಕೆಗಳು ಮಿತಿಮೀರಿದೆ. ಕಾಂಗ್ರೆಸ್ ನಡೆಸುವ ಎಲ್ಲ ಯಾತ್ರೆ, ಅಭಿಯಾನದ ಹಿಂದಿರುವುದು ಹಿಂದು ದ್ವೇಷ. ಕಾಂಗ್ರೆಸ್ ಅಧಿನಾಯಕರ ಭಾವನೆಗಳಿಗೆ ಸತೀಶ್ ಜಾರಕಿಹೊಳಿ ಮಾತಿನ ರೂಪ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದರು. ಇದನ್ನೂ ಓದಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ

ಹಿಂದುತ್ವ ಎಂಬ ಜೀವನ ಪದ್ಧತಿಯನ್ನೇ ಟೀಕಿಸಿದ ಸತೀಶ್ ಜಾರಕಿಹೊಳಿ ಪರವಾಗಿ ಕಾಂಗ್ರೆಸ್ ಇಡಿ ರಾಷ್ಟ್ರದ ಕ್ಷಮೆ ಯಾಚಿಸಬೇಕು. ಇದು ವೈಯಕ್ತಿಕ ಅಭಿಪ್ರಾಯ ಎಂದು ಕೈ ತೊಳೆದುಕೊಳ್ಳುವ ನಾಟಕ ಬೇಡ ಮಾನ್ಯ ಸುರ್ಜೇವಾಲಾ ಅವರೇ, ಭಾರತೀಯತೆಗೆ ಅಪಮಾನ ಮಾಡುವ ನಿಮ್ಮ ನಾಟಕಕ್ಕೆ ಕ್ಷಮೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಸ್ವಾಭಿಮಾನಿ ಹಿಂದು….
– ಹಿಂದುತ್ವದ ಅವಹೇಳನವಾದಾಗ ನಾನು ಪ್ರತಿರೋಧಿಸುತ್ತೇನೆ.
– ರಾಷ್ಟ್ರೀಯತೆಗೆ ಧಕ್ಕೆಯಾದಾಗ ನಾನು ಸೆಟೆದು ನಿಲ್ಲುತ್ತೇನೆ.
– ಭಾರತೀಯ ಪರಂಪರೆಯ ನಿಂದನೆಯಾದಾಗ ನಾನು ಹೋರಾಡುತ್ತೇನೆ.

ಸ್ವಧರ್ಮ, ಸ್ವದೇಶ, ಸ್ವಭಾಷೆ ನನ್ನ ಅಸ್ಮಿತೆ..

ನಾನು ಸ್ವಾಭಿಮಾನಿ ಹಿಂದು…..
– ನನ್ನೊಡಲೊಳಗೆ ದೇಶಭಕ್ತಿಯ ಕೆಚ್ಚಿದೆ.
– ನನ್ನ ಹೃದಯದಲ್ಲಿ ಹಿಂದು ರಾಷ್ಟ್ರ ಪ್ರೀತಿ ಇದೆ.
– ನನ್ನ ಮನಸಿನಲ್ಲಿ ಹಿಂದುತ್ವದ ಸಂಸ್ಕಾರವಿದೆ.
– ನನ್ನ ಉಸಿರಿನಲ್ಲಿ ರಾಷ್ಟ್ರ ವಿರೋಧಿಗಳ ವಿರುದ್ಧ ದ್ವೇಷವಿದೆ.
– ನನ್ನ ರಕ್ತದಲ್ಲಿ ಶಿವಾಜಿಯ ಸ್ವಾಭಿಮಾನವಿದೆ.

ಹಿಂದುತ್ವಕ್ಕೆ ಅಪಮಾನವಾದಾಗ ನಾ ಮೌನಿಯಾಗಲಾರೆ..

ಸತೀಶ್ ಜಾರಕಿಹೊಳಿ ಹೇಳಿದ್ದೇನು..? :ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *