ಕೋಲಾರ: ಶಿಕ್ಷಕನೇ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಿಲ್ಲೆಯ ವೇಮಗಲ್‍ನಲ್ಲಿ ನಡೆದಿದೆ.
ಕಾಮುಕ ಶಿಕ್ಷಕನನ್ನು ಮುನಿರಾಜು ಎಂದು ಗುರುತಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡಿಸೆಂಬರ್ 30 ಶನಿವಾರದಂದು ಅತ್ಯಾಚಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಂತ್ರಸ್ತ ಬಾಲಕಿಯನ್ನ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಡಿಸೆಂಬರ್ 30ರಂದು ಶಾಲೆಯಲ್ಲಿ ಆರೋಪಿ ಮುನಿರಾಜು ಯಾರೂ ಇಲ್ಲದ ವೇಳೆ 11 ವರ್ಷದ ಬಾಲಕಿಯನ್ನು ತನ್ನ ಕಚೇರಿಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಆದರೆ ಶಾಲೆಯ ಆಡಳಿತ ಮಂಡಳಿ ಪೋಷಕರಿಗೆ ದೂರು ನೀಡಿದಂತೆ ತಿಳಿಸಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ. ಮಂಗಳವಾರ ಸಂತ್ರಸ್ತೆಯ ಪೋಷಕರು ಆರೋಪಿ ವಿರುದ್ಧ ದೂರು ನೀಡಿದ್ದಾರೆ.
ಈ ಪ್ರಕರಣ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ: ಗರ್ಭಿಣಿ ಅಕ್ಕನಿಗೆ ಸಹಾಯ ಮಾಡಲು ಬಂದಿದ್ದ ಬಾಲಕಿಯ ಕೈ, ಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನ





