ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

Public TV
1 Min Read

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ (Minor Girl) ಮದ್ಯ (Alcohol) ಕುಡಿಸಿ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ (Gang Rape) ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ.

ಸಾಗರದ ಜೆ.ಪಿ.ನಗರ ನಿವಾಸಿಗಳಾದ ಶಾಬಾದ್ (26), ಅಜಯ್ (32) ಅತ್ಯಾಚಾರ ನಡೆಸಿದ ಕಿಡಿಗೇಡಿಗಳು. ಸಾಗರ ನಿವಾಸಿಯಾದ ಅಪ್ರಾಪ್ತ ಬಾಲಕಿಯನ್ನು ಆರೋಪಿಗಳು ಪ್ರವಾಸಕ್ಕೆಂದು ಜೋಗಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಬಾಲಕಿಗೆ ಮದ್ಯ ಕುಡಿಸಿ ಅತ್ಯಾಚಾರ ನಡೆಸಿದ್ದಾರೆ. ಮದ್ಯದ ಅಮಲಿನಲ್ಲೇ ಮನೆಗೆ ವಾಪಸ್ ಬಂದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ಇದನ್ನೂ ಓದಿ: ಲೇಡಿಸ್‌ ಹಾಸ್ಟೆಲ್‌ ಮುಂದೆಯೇ ಹಸ್ತಮೈಥುನ – ವಿಕೃತ ಕಾಮಿ ಹೆಡೆಮುರಿ ಕಟ್ಟಿದ ಕೊಡಗು ಪೊಲೀಸರು

ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ಬಾಲಕಿಯ ಪೋಷಕರು ಪೋಕ್ಸೋ ಕಾಯ್ದೆ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಗಂಡ ಜೈಲಿಗೆ – ಮನನೊಂದು ಪತ್ನಿ ಆತ್ಮಹತ್ಯೆ; ಜೈಲಲ್ಲಿದ್ದ ಪತಿ ಹೃದಯಾಘಾತದಿಂದ ಸಾವು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್