ಬಸ್ ನಿಲ್ಲಿಸದೇ ಮಹಿಳೆ ಜೊತೆ ಅನುಚಿತ ವರ್ತನೆ – ನಿರ್ವಾಹಕನ ಮೇಲೆ ಸಂಬಂಧಿಕರಿಂದ ಹಲ್ಲೆ

Public TV
1 Min Read

ಚಿತ್ರದುರ್ಗ: ಸಾರಿಗೆ ಬಸ್ (KSRTC) ನಿರ್ವಾಹಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಸಿದ್ದಕ್ಕೆ ಆಕೆಯ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ಗುರುವಾರ ಚಳ್ಳಕೆರೆ (Challakere) ಬಸ್ ನಿಲ್ದಾಣದ ಬಳಿ ನಡೆದಿದೆ.

ಹಲ್ಲೆಗೊಳಗಾದ ನಿರ್ವಾಹಕನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ (Bengaluru) ತೆರಳುತ್ತಿದ್ದ ಬಸ್‍ನಲ್ಲಿ ಮಹಿಳೆ ಬುಧವಾರ ಚಳ್ಳಕೆರೆಯಿಂದ ದಾಬಸ್ ಪೇಟೆಗೆ ಪ್ರಯಾಣಿಸುತ್ತಿದ್ದಳು. ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸುವಂತೆ ಮಹಿಳೆ ಹೇಳಿದ್ದಳು. ಆದರೆ ಅಲ್ಲಿ ಬಸ್ ನಿಲ್ಲಿಸದೇ ನಿರ್ವಾಹಕ ನಿಯಮದಂತೆ ಮೆಜಸ್ಟಿಕ್‍ನಲ್ಲಿ (Majestic) ಬಸ್ ನಿಲ್ಲಿಸಿದ್ದಾನೆ. ಇದರಿಂದ ಸಿಟ್ಟಾದ ಮಹಿಳೆ ನಿರ್ವಾಹಕನೊಂದಿಗೆ ಗಲಾಟೆ ಮಾಡಿದ್ದಾಳೆ. ಅಲ್ಲದೇ ಕುಟುಂಬಸ್ಥರ ಬಳಿ ನಿರ್ವಾಹಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರಧಾನಿ ಮೋದಿ ಕೊಲ್ಲುತ್ತೇನೆ ಎಂದು ಕರೆ ಮಾಡಿದ್ದ ವ್ಯಕ್ತಿ ಬಂಧನ

ಈ ಘಟನೆಯಿಂದಾಗಿ ಆಕ್ರೋಶಗೊಂಡಿದ್ದ ಮಹಿಳೆ ಚಳ್ಳಕೆರೆ ಬಸ್ ನಿಲ್ದಾಣದ ಬಳಿ ಆ ಬಸ್ ಬರುವವರೆಗೆ ಸಂಬಂಧಿಗಳೊಂದಿಗೆ ಕಾದು ಕುಳಿತು ಹಲ್ಲೆ ನಡೆಸಿದ್ದಾಳೆ. ಹಲ್ಲೆಗೊಳಗಾದ ಬಸ್ ನಿರ್ವಾಹಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಾರಿಗೆ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ವಾಷಿಂಗ್ಟನ್‌ನಲ್ಲಿ ಅದ್ಧೂರಿ ಸ್ವಾಗತ – ಮೋದಿಗಾಗಿ ಖಾದ್ಯ ತಯಾರಿಸಿದ್ದಾರೆ ಜಿಲ್ ಬೈಡೆನ್

Share This Article