ಹೆಚ್ಚಿನ ಹಣ ಕೊಡಲು ನಿರಾಕರಿಸಿದ ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು

Public TV
2 Min Read

ಪಾಟ್ನಾ: ತಂದೆ-ಮಗ ದಲಿತ ಮಹಿಳೆಯ (Dalit Woman) ಬಳಿ ಸಾಲ ವಾಪಸ್ ಪಡೆದು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದು, ಮಹಿಳೆ ಹಣ ಕೊಡಲು ನಿರಾಕರಿಸಿದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿ, ಮೂತ್ರ (Urine) ಕುಡಿಸಿದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ.

ಘಟನೆಯಿಂದ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರ ಪ್ರಕಾರ, ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಮಗ ಅಂಶು ಮತ್ತು ಇತರ ನಾಲ್ವರು ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ದಲಿತ ಮಹಿಳೆಯ ಮನೆಗೆ ನುಗ್ಗಿ ಬಲವಂತವಾಗಿ ಆಕೆಯನ್ನು ತಮ್ಮ ಮನೆಗೆ ಒಯ್ದಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

ಬಳಿಕ ಆಕೆಯ ಮೇಲೆ ಕ್ರೂರ ರೀತಿಯಲ್ಲಿ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿದ್ದು, ಕೋಲಿನಿಂದ ಹೊಡೆದಿದ್ದಾರೆ. ಬಳಿಕ ಪ್ರಮೋದ್ ಸಿಂಗ್ ತನ್ನ ಮಗನಿಗೆ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾನೆ. ನಂತರ ಸಂತ್ರಸ್ತೆ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ತನ್ನ ಮನೆಗೆ ಮರಳಿದ್ದಾಳೆ. ಇದನ್ನೂ ಓದಿ: ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ದಲಿತ ಮಹಿಳೆ ಕೆಲ ತಿಂಗಳ ಹಿಂದೆ ಪ್ರಮೋದ್ ಸಿಂಗ್‌ನಿಂದ ಬಡ್ಡಿಗೆ 1,500 ರೂ. ಸಾಲ (Loan) ಪಡೆದಿದ್ದು, ಬಡ್ಡಿ ಸಮೇತ ಹಣವನ್ನು ಮರುಪಾವತಿ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದಾಗಿಯೂ ಆರೋಪಿ ಆಕೆಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದು, ಅದನ್ನು ನೀಡಲು ಮಹಿಳೆ ನಿರಾಕರಿಸಿದ್ದಾಳೆ. ಹೆಚ್ಚಿನ ಹಣ ನೀಡದಿದ್ದರೇ ಮಹಿಳೆಯನ್ನು ವಿವಸ್ತ್ರ ಮಾಡಿ ಊರೂರು ಅಲೆಯುವಂತೆ ಮಾಡುವುದಾಗಿ ಪ್ರಮೋದ್ ಮಹಿಳೆಗೆ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಐಫೋನ್‌ ನೀಡಲು ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ

ಬೆದರಿಕೆಯ ಕುರಿತು ಮಹಿಳೆ ಈ ಹಿಂದೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಅಶಾಂತಿ ಉಂಟಾಗಿದ್ದು, ಸಂತ್ರಸ್ತ ಕುಟುಂಬ ಹಾಗೂ ದಲಿತ ಸಮುದಾಯದವರು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಘಟನೆ ಬಳಿಕ ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್