ಮಾತು ಬರದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

Public TV
1 Min Read

ಬೆಂಗಳೂರು: ಕೃಷಿ ಭೂಮಿಯ ಜೋಳದ ಪೊದೆಯೊಂದರಲ್ಲಿ ಮಾತು ಬರದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ದೊಡ್ಡಬೆಲೆ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ ಎನ್ನಲಾಗಿದೆ. ಮೃತ ವೃದ್ಧೆ ಇದೇ ಗ್ರಾಮದ 48 ವರ್ಷ ವಯಸ್ಸಿನ ಗಂಗಮ್ಮ ಎಂದು ಗುರುತಿಸಲಾಗಿದೆ.

ನಗ್ನ ಸ್ಥಿತಿಯಲ್ಲಿದ್ದ ಮಹಿಳೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೆ ಮೈಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಶಂಕಿಸಿದ್ದಾರೆ.

ಸದ್ಯ ತ್ಯಾಮಗೊಂಡ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *