Tumakuru| ವಾಮಾಚಾರ ಮಾಡಿ ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Public TV
1 Min Read

ತುಮಕೂರು: ವಾಮಾಚಾರ (Witchcraft) ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ (Kempamma Devi Temple) ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ.

ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಸಂಪೂರ್ಣ ಬಾಗಿಲಿಗೆ ಬೆಂಕಿ ಆವರಿಸಿದೆ. ಇಂದು ಬೆಳಗ್ಗೆ ಪೂಜಾ ಕೈಂಕರ್ಯಗಳನ್ನು ನಡೆಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ‘ಡೆವಿಲ್’ ಚಿತ್ರೀಕರಣ ಆರಂಭಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ದಾಸ

ಘಟನೆಯಿಂದ ದೇವಸ್ಥಾನದ ಬಾಗಿಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಕುಂಕುಮ, ತಾಮ್ರದ ತಗಡು ವಸ್ತುಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Kolar| 2 ಖಾಸಗಿ ಬಸ್‌ಗಳ ನಡುವೆ ಅಪಘಾತ – ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

Share This Article