ಹಿಂದೂ ಸಮಾಜೋತ್ಸವದ ಫ್ಲೆಕ್ಸ್‌ಗೆ ಬ್ಲೇಡ್‌ – ಕಿಡಿಗೇಡಿಗಳ ವಿರುದ್ಧ ಆಕ್ರೋಶ

1 Min Read

ಚಿಕ್ಕಮಗಳೂರು: ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ಹಾಕಿದ್ದ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬ್ಲೇಡ್‌ನಿಂದ ಹರಿದು ಹಾಕಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಸಮೀಪದ ಬೋಳೂರು ಕ್ರಾಸ್ ಬಳಿ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಹಿಂದೂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರೀಗೆಬೈಲು ಗ್ರಾಮದಲ್ಲಿ ಜ.31 ರಂದು ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕಾಗಿ ಜ.28ರ ರಾತ್ರಿ ಯುವಕರು ಫ್ಲೆಕ್ಸ್‌ ಅಳವಡಿಸಿದ್ದರು. ನಡುರಾತ್ರಿ 12:30ರ ತನಕವೂ ಯುವಕರು ಬ್ಯಾನರ್‌ ಬಳಿಯೇ ಇದ್ದು, ತೆರಳಿದ್ದರು. ಇಂದು ಮುಂಜಾನೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 23 ಸಾವಿರ ಕೇಸ್ ದಾಖಲು

ಹಿಂದೂ ಸಮಾಜೋತ್ಸವ ಕಾರ್ಯಕ್ರಮದ ಅಧ್ಯಕ್ಷ ಪ್ರದೀಪ್ ಚೋಳರಮನೆ ಶೃಂಗೇರಿ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಶೃಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ

Share This Article