ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡ್ತೇವೆ: ಬಾಲಕೃಷ್ಣ

Public TV
2 Min Read

ಬೆಂಗಳೂರು: ರಾಮನಗರ (Ramanagar) ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ನಾಮಕರಣ ಮಾಡೋ ಚರ್ಚೆ ಆಗುತ್ತಿದೆ. ಡಿಕೆ ಶಿವಕುಮಾರ್ (D.K Shivakumar) ಅವರು ಇದನ್ನೇ ಹೇಳಿದ್ದಾರೆ. ಕನಕಪುರವನ್ನ (Kanakapura) ಬೆಂಗಳೂರಿಗೆ ಸೇರಿಸಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮಾಡೋ ಪ್ಲ್ಯಾನ್ ಇದೆ ಎಂದು ಶಾಸಕ ಎಚ್.ಸಿ ಬಾಲಕೃಷ್ಣ (MLA HC Balakrishna) ತಿಳಿಸಿದ್ದಾರೆ.

ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಡಿಕೆಶಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಕನಕಪುರವನ್ನ ಬೆಂಗಳೂರಿಗೆ ಸೇರಿಸುತ್ತೇವೆ ಅನ್ನೋದು ಅಲ್ಲ. ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಅಂತಾರಾಷ್ಟ್ರೀಯ ಬ್ರ್ಯಾಂಡ್ ನೇಮ್ ಇದೆ. ಮೊದಲು ನಮ್ಮದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಂತ ಇತ್ತು. ಅದೇ ಬೆಂಗಳೂರು ಅನ್ನೋ ಹೆಸರನ್ನ ಇಟ್ಟುಕೊಂಡ್ರೆ ನಮ್ಮನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುತ್ತಾರೆ. ಹೀಗಾಗಿ ಅದನ್ನ ಬದಲಾವಣೆ ಮಾಡಬೇಕು ಅಂತ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರವನ್ನ ಬೆಂಗಳೂರಿಗೆ ಸೇರಿಸೋಕೆ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರಾಮನಗರ ಇಬ್ಭಾಗ, ಬೆಂಗಳೂರಿಗೆ ಕನಕಪುರ – ಏನಿದು ಡಿಕೆಶಿ ಲೆಕ್ಕಾಚಾರ?

ಕುಮಾರಸ್ವಾಮಿ ಹೇಳಿಕೆಗೆ ಬೆಲೆ ಕೊಡೋ ಅವಶ್ಯಕತೆ ಇಲ್ಲ. ಅವರು ಹತಾಶೆಯಿಂದ ಮಾತಾಡ್ತಿದ್ದಾರೆ. ನಾವು ಶಾಸಕರಾಗಿರೋದು ಕುಮಾರಸ್ವಾಮಿಗೆ ಇಷ್ಟ ಇಲ್ಲ. ಹೀಗಾಗಿ ಕುಮಾರಸ್ವಾಮಿ ಮಾತಿಗೆ ಬೆಲೆ ಕೊಡಬೇಕಿಲ್ಲ. ಕನಕಪುರದಲ್ಲಿ ಕುಮಾರಸ್ವಾಮಿ ಆಸ್ತಿ ಇಲ್ಲ. ಕುಮಾರಸ್ವಾಮಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ಹೆಚ್‍ಡಿಕೆ ವಿರುದ್ಧ ಶಾಸಕರು ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆಯನ್ನೇ ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ನಾಮಕರಣ ಮಾಡ್ತೀವಿ. ಈಗ ಸಾರ್ವಜನಿಕ ಚರ್ಚೆಗೆ ಬಿಟ್ಟಿದ್ದಾರೆ. ಸಾರ್ವಜನಿಕರು ಹೇಳಿದಂತೆ ಮುಂದೆ ಮಾಡ್ತೀವಿ. ಕುಮಾರಸ್ವಾಮಿಗೆ ನಮ್ಮನ್ನು ಕಂಡ್ರೆ ಆಗಲ್ಲ. ನಾವು ಕರಿ ಕಾಗೆ ಅಂದ್ರೆ ಅವರು ಬಿಳಿ ಕಾಗೆ ಅಂತಾರೆ. ಅವರು ನಾವು ಏನೇ ಮಾತಾಡಿದ್ರು ವಿರೋಧ ಮಾಡ್ತಾರೆ. ಇದಕ್ಕೆ ನಾವು ಬೆಲೆ ಕೊಡೊ ಅವಶ್ಯಕತೆ ಇಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಮಾಡೋಕೆ ನಾವೇ ಒತ್ತಡ ಮಾಡಿದ್ವಿ. ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡೋಕೆ ನಮ್ಮ ಒಪ್ಪಿಗೆ ಇದೆ ಎಂದರು.

ಒಟ್ಟಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕು ಅನ್ನೋದು ಈಗ ಚರ್ಚೆಗೆ ಬಿಟ್ಟಿದ್ದಾರೆ. ಚರ್ಚೆ ಆಗಲಿ, ಸಾರ್ವಜನಿಕರು ಏನ್ ಅಭಿಪ್ರಾಯ ಕೊಡ್ತಾರೋ ಅದರ ಮೇಲೆ ಮುಂದಿನ ತೀರ್ಮಾನ ಆಗುತ್ತವೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್