ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

0 Min Read

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬೈರತಿ ಬಸವರಾಜ್ (Byrati Basavaraj) ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬೈರತಿ ಬಸವರಾಜ್ ರಿಲೀಸ್ ಆಗಿದ್ದಾರೆ. ನಿನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿತ್ತು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

ಜೈಲಿನ ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ಜೈಲಿಂದ ರಿಲೀಸ್ ಆದ ಶಾಸಕ ಬೈರತಿ ಬಸವರಾಜ್ ಕಾರಿನಲ್ಲಿ ತೆರಳಿದರು.

Share This Article