ಶಾಸಕ ಮಾನಪ್ಪ ವಜ್ಜಲ್‍ಗೆ ಪುತ್ರ ವಿಯೋಗ

Public TV
0 Min Read

ರಾಯಚೂರು: ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್‍ಗೆ (Manappa D.Vajjal) ಪುತ್ರ ವಿಯೋಗವಾಗಿದೆ. ಎರಡನೇ ಪುತ್ರ ಶ್ರೀಮಂತರಾಯ ವಜ್ಜಲ್(32) ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆ, ಡಸ್ಟ್ ಅಲರ್ಜಿ ಹಾಗೂ ಶ್ವಾಸಕೋಶದ ತೊಂದರೆಯಿಂದ ಶ್ರೀಮಂತರಾಯ ಅವರು ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಶ್ರೀಮಂತರಾಯ ವಜ್ಜಲ್ ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಲಿಂಗಸುಗೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮನೆ ಬಳಿ ಮೂತ್ರ ವಿಸರ್ಜಿಸಿದಳೆಂದು ಮಹಿಳೆಯ ಗುಪ್ತಾಂಗಕ್ಕೆ ರಾಡ್‍ನಿಂದ ಹಲ್ಲೆ!

Share This Article